ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌–19 ಪಿಡುಗಿನಿಂದ ಆರ್ಥಿಕ ಬಿಕ್ಕಟ್ಟು: ನೆರವಿನ ಹಸ್ತ ಚಾಚಿದ ಪಿಸಿಬಿ

Last Updated 4 ಮೇ 2020, 20:00 IST
ಅಕ್ಷರ ಗಾತ್ರ

ಕರಾಚಿ: ಕೋವಿಡ್‌–19 ಪಿಡುಗಿನಿಂದಾಗಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಇದರ ನಡುವೆಯೂ ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚಿದೆ.

ಕೊರೊನಾ ಬಿಕ್ಕಟ್ಟಿನಿಂದಾಗಿ ಕಷ್ಟದ ದಿನಗಳನ್ನು ದೂಡುತ್ತಿರುವ ಪ್ರಥಮ ದರ್ಜೆ ಕ್ರಿಕೆಟಿಗರು, ಸ್ಕೋರರ್‌ಗಳು, ಅಂಪೈರ್‌ಗಳು ಹಾಗೂ ಮೈದಾನ ಸಿಬ್ಬಂದಿಗೆ ಹಣಕಾಸಿನ ಸಹಾಯ ಮಾಡಲು ಮುಂದಾಗಿದೆ.

‘ಪ್ರಥಮ ದರ್ಜೆ ಕ್ರಿಕೆಟಿಗರಿಗೆ ₹25 ಸಾವಿರ, ಪಂದ್ಯದ ಅಧಿಕಾರಿಗಳಿಗೆ ₹15 ಸಾವಿರ ಹಾಗೂ ಮೈದಾನ ಸಿಬ್ಬಂದಿಗೆ ₹10 ಸಾವಿರ ನೀಡಲು ನಿರ್ಧರಿಸಿದ್ದೇವೆ. ಫಲಾನುಭವಿಗಳ ಮಾಹಿತಿಯನ್ನು ಗೋಪ್ಯವಾಗಿ ಇಡಲಾಗುವುದು. ರಂಜಾನ್‌ ಹಬ್ಬದ ರಜೆಗೂ ಮುನ್ನವೇ ಈ ಮೊತ್ತವನ್ನು ಬಿಡುಗಡೆ ಮಾಡಲು ತೀರ್ಮಾನಿಸಿದ್ದೇವೆ’ ಎಂದು ಪಿಸಿಬಿ, ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಶಾಹೀದ್‌ ಅಫ್ರಿದಿ, ಅಜರ್‌ ಅಲಿ, ರುಮಾನ್‌ ರಯೀಸ್‌, ಸರ್ಫರಾಜ್‌ ಅಹ್ಮದ್‌ ಸೇರಿದಂತೆ ಹಲವು ಹಿರಿಯ ಕ್ರಿಕೆಟಿಗರು ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ನೆರವು ಒದಗಿಸುತ್ತಿದ್ದಾರೆ. ಅವರ ಕಾರ್ಯಕ್ಕೆ‍ಪಿಸಿಬಿ ಮುಖ್ಯಸ್ಥ ಎಹಸಾನ್‌ ಮಣಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಕೆಲ ಹಿರಿಯ ಆಟಗಾರರು ಸ್ವಯಂ ಸೇವಾ ಸಂಸ್ಥೆಗಳ ನೆರವಿನೊಂದಿಗೆ ಕಷ್ಟದಲ್ಲಿರುವವರ ಕಣ್ಣೀರು ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಕಾರ್ಯವು ಶ್ಲಾಘನೀಯವಾದುದು’ ಎಂದು ಮಣಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT