ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗೂಲಿ ವಿರುದ್ಧದ ದೂರು ವಜಾ

Last Updated 17 ನವೆಂಬರ್ 2019, 19:42 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರ ವಿರುದ್ಧ ದಾಖಲಾಗಿದ್ದ ಹಿತಾಸಕ್ತಿ ಸಂಘರ್ಷ ನಿಯಮ ಉಲ್ಲಂಘನೆ ದೂರನ್ನು ನೀತಿ ಅಧಿಕಾರಿ ಡಿ.ಕೆ. ಜೈನ್ ಕೈಬಿಟ್ಟಿದ್ದಾರೆ. ಇದರಿಂದಾಗಿ ಗಂಗೂಲಿ ಅವರು ನಿರಾಳರಾಗಿದ್ದಾರೆ.

‘ಬಂಗಾಳ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದುಕೊಂಡು ಬಿಸಿಸಿಐಗೂ ಅಧ್ಯಕ್ಷರಾಗಿರುವ ಗಂಗೂಲಿ ಹಿತಾಸಕ್ತಿ ಸಂಘರ್ಷ ನಿಯಮ ಉಲ್ಲಂಘಿಸಿದ್ದಾರೆ’ ಎಂದು ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಆಜೀವ ಸದಸ್ಯ ಸಂಜೀವ್ ಗುಪ್ತಾ ದೂರು ನೀಡಿದ್ದರು. ನೂತನ ನಿಯಮಾವಳಿಯ ಅನ್ವಯ ಒಬ್ಬ ವ್ಯಕ್ತಿಯು ಏಕಕಾಲಕ್ಕೆ ಎರಡು ಹುದ್ದೆಗಳಲ್ಲಿ ಇರುವಂತಿಲ್ಲ.

‘ದೂರನ್ನು ಪರಿಶೀಲಿಸಿದ್ದೇವೆ. ಗಂಗೂಲಿ ಅಕ್ಟೋಬರ್ 23ರಂದು ಬಿಸಿಸಿಐ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಆದಕ್ಕೂ ಮುನ್ನ ಅವರು ಬಂಗಾಳ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದ್ದರಿಂದ ಅವರು ನಿಯಮ ಉಲ್ಲಂಘಿಸಿಲ್ಲ. ಅದಕ್ಕಾಗಿ ದೂರು ನಿರರ್ಥಕವಾಗಿದೆ’ ಎಂದು ಜೈನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT