ನವದಹೆಲಿ (ಪಿಟಿಐ): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭ ಆಟಗಾರ ಫಿಲ್ ಸಾಲ್ಟ್ ಇಂಗ್ಲೆಂಡ್ಗೆ ಮರಳಿದ್ದಾರೆ. ಬೆರಳಿನ ಗಾಯಕ್ಕೆ ಲಂಡನ್ನಲ್ಲಿ ಸ್ಕ್ಯಾನಿಂಗ್ಗೆ ಒಳಗಾಗಲಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಏಪ್ರಿಲ್ 18ರಂದು ಚಿನ್ನಸ್ವಾಮಿ ಕ್ರೀಡಾಂಗಣ ದಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯದ ಸಂದರ್ಭದಲ್ಲಿ ಡೀಪ್ ಬ್ಯಾಕ್ವರ್ಡ್ ಸ್ಕ್ವೇರ್ಲೆಗ್ನಲ್ಲಿ ಬೌಂಡರಿ ತಡೆಯುವ ಯತ್ನದಲ್ಲಿ ಅವರ ಎಡಗೈ ಬೆರಳಿಗೆ ಗಾಯವಾಗಿತ್ತು. 29 ವರ್ಷ ವಯಸ್ಸಿನ ಬ್ಯಾಟರ್ ಕೊನೆಯ ಮೂರು ಪಂದ್ಯಗಳಲ್ಲಿ ಆಡಿರಲಿಲ್ಲ. ಅವರ ಬದಲು ಇಂಗ್ಲೆಂಡ್ನ ಇನ್ನೊಬ್ಬ ಆಟಗಾರ ಜೇಕಬ್ ಬೆಥೆಲ್ ಆಡಿದ್ದರು.

ಘೋಷ್ ಅಲಭ್ಯ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮತ್ತೊಬ್ಬರು ಗಾಯದ ಸಮಸ್ಯೆಯಿಂದ ಹೊರಬಿದ್ದಿದ್ದಾರೆ. ವೇಗದ ಬೌಲರ್ ರಾಮಕೃಷ್ಣ ಘೋಷ್ ಅವರು ಬಲಗಾಲಿನ ಮೂಳೆ ಮುರಿತದಿಂದ ಉಳಿದ ಪಂದ್ಯಗಳನ್ನು ಕಳೆದುಕೊಂಡಿದ್ದಾರೆ.

ಚೆಪಾಕ್ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯದ ವೇಳೆ ಘೋಷ್ ಗಾಯಾಳಾಗಿದ್ದರು. ಅವರ ಅಲಭ್ಯತೆ ಸಿಎಸ್ಕೆ ತಂಡ ತನ್ನ ಎಕ್ಸ್ ಖಾತೆಯಲ್ಲಿ ಪ್ರಕಟಿಸಿದೆ. ಅವರ ಸ್ಥಾನಕ್ಕೆ ಬೇರೊಬ್ಬರ ಹೆಸರನ್ನು ತಂಡ ಪ್ರಕಟಿಸಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-51-197902962

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.