ಅಡಿಲೇಡ್: ಮೆರಿಲ್‌ಬೋನ್ ಕ್ರಿಕೆಟ್ ಕ್ಲಬ್‌ನ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಪಿಂಕ್‌ಬಾಲ್ ಟೆಸ್ಟ್ ಪ್ರತಿಪಾದಕ ಕೀತ್ ಬ್ರಾಡ್‌ಶಾ (58) ನಿಧನರಾದರು.

’ಕ್ರಿಕೆಟ್ ವಲಯದಲ್ಲಿ ಪ್ರೀತಿಪಾತ್ರರಾಗಿದ್ದ ಮತ್ತು ಗೌರವಾನ್ವಿತರಾಗಿದ್ದ ಕೀತ್ ಬ್ರಾಡ್ ಶಾ ಇನ್ನಿಲ್ಲ‘ ಎಂದು ಮಂಗಳವಾರ ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಣೆಯಲ್ಲಿ ತಿಳಿಸಿದೆ.

1980ರಲ್ಲಿ ಅವರು ಆಸ್ಟ್ರೇಲಿಯಾದ ಟಾಸ್ಮೇನಿಯಾ ತಂಡದಲ್ಲಿ ಪ್ರಥಮ ದರ್ಜೆ ಕ್ರಿಕೆಟ್ ಆಡಿದ್ದರು. ನಂತರ ಅವರು ಇಂಗ್ಲೆಂಡ್‌ಗೆ ತೆರಳಿದ್ದರು. 2006ರಲ್ಲಿ ಎಂಸಿಸಿಗೆ ಪ್ರಥಮ ಬ್ರಿಟಿಷೇತರ ಸಿಇಒ ಆಗಿ ನೇಮಕವಾದರು.

2008ರಲ್ಲಿ ಅವರಿಗೆ ಮಲ್ಟಿಪಲ್ ಮೈಲೊಮಾ ಕಾಯಿಲೆ ಇರುವುದು ಪತ್ತೆಯಾಗಿತ್ತು. 2011ರಲ್ಲಿ ಆಸ್ಟ್ರೇಲಿಯಾಕ್ಕೆ ಮರಳಿದ್ದ ಅವರು ಸೌತ್ ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆಗೆ ಸಿಇಒ ಆಗಿ ನೇಮಕವಾದರು. ಹೊನಲು ಬೆಳಕಿನ ಟೆಸ್ಟ್ ಕ್ರಿಕೆಟ್ ಆರಂಭಕ್ಕೆ ಶ್ರಮಿಸಿ ಯಶಸ್ವಿಯಾದರು. 2015ರಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವಣ ಅಡಿಲೇಡ್‌ನಲ್ಲಿ ಪಿಂಕ್ ಬಾಲ್ ಟೆಸ್ಟ್ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.