ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾ ವಿರುದ್ಧದ ಏಕದಿನ, ಟಿ20 ಪಂದ್ಯ: ಭಾರತ ಮಹಿಳಾ ತಂಡದಲ್ಲಿ ಹೊಸ ಮುಖಗಳು

Published 25 ಡಿಸೆಂಬರ್ 2023, 14:11 IST
Last Updated 25 ಡಿಸೆಂಬರ್ 2023, 14:11 IST
ಅಕ್ಷರ ಗಾತ್ರ

ನವದೆಹಲಿ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೂರು ಏಕದಿನ ಮತ್ತು ಟಿ20 ಪಂದ್ಯಗಳಿಗೆ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ. ಕನ್ನಡತಿ ಶ್ರೇಯಾಂಕಾ ಪಾಟೀಲ್ ಜೊತೆಗೆ ಮನ್ನತ್ ಕಶ್ಯಪ್, ಸೈಕಾ ಇಶಾಕ್ ಮತ್ತು ಟಿಟಾಸ್ ಸಾಧು ಅವರಿಗೆ ಏಕದಿನ ತಂಡದಲ್ಲಿ ಮೊದಲ ಬಾರಿಗೆ  ಅವಕಾಶ ಕಲ್ಪಿಸಲಾಗಿದೆ. 

ಡಿಸೆಂಬರ್ 28 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ಪಟಿಯಾಲ ಮೂಲದ 20ರ ಹರೆಯದ ಎಡಗೈ ಸ್ಪಿನ್ನರ್‌ ಕಶ್ಯಪ್ ಅವರನ್ನು ಈ ಹಿಂದೆ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾಗಿತ್ತು. ಆದರೆ ಅವರಿಗೆ ಆಡುವ ಅವಕಾಶ ಸಿಕ್ಕಿರಲಿಲ್ಲ.

ಈ ತಿಂಗಳ ಆರಂಭದಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಪದಾರ್ಪಣೆ ಮಾಡಿದ ನಂತರ ಶ್ರೇಯಾಂಕಾ ಮೊದಲ ಬಾರಿಗೆ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. 

ಹೀದರ್ ನೈಟ್ ನೇತೃತ್ವದ ಮಹಿಳಾ ತಂಡದ ವಿರುದ್ಧ ಈ ತಿಂಗಳ ಆರಂಭದಲ್ಲಿ ನಡೆದ ಮೂರು ಟಿ20 ಪಂದ್ಯಗಳಲ್ಲಿ, ಶ್ರೇಯಾಂಕಾ ಐದು ವಿಕೆಟ್‌ಗಳನ್ನು ಪಡೆದಿದ್ದರು.  ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಪಂದ್ಯದ ಆಟಗಾರ್ತಿ ಪ್ರಶಸ್ತಿಯನ್ನೂ ಗಳಿಸಿದ್ದರು.

ಕಶ್ಯಪ್ ಅವರು ಫೆಬ್ರವರಿಯಲ್ಲಿ ನಡೆದ 19 ವರ್ಷದೊಳಗಿನ ಭಾರತ ಮಹಿಳಾ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು.  ಟಿಟಾಸ್ ಸಾಧು ಕೂಡ ಇದ್ದರು.

ಉದ್ಘಾಟನಾ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಮುಂಬೈ ಫ್ರಾಂಚೈಸಿಯ ಅಗ್ರ ಬೌಲರ್‌ಗಳಲ್ಲಿ ಸೈಕಾ ಇಶಾಕ್  ಸಹ ಒಬ್ಬರಾಗಿದ್ದರು

ಮೂರು ಪಂದ್ಯಗಳ ಏಕದಿನ ಸರಣಿ ಡಿಸೆಂಬರ್ 28 ರಿಂದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಮುಂದಿನ ಎರಡು ಪಂದ್ಯಗಳು ಡಿಸೆಂಬರ್ 30 ಮತ್ತು ಜನವರಿ 2 ರಂದು ನಡೆಯಲಿವೆ.

ಜನವರಿ 5, 7 ಮತ್ತು 9 ರಂದು ಟಿ20 ಪಂದ್ಯಗಳಿಗೆ ನವೀ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. 

ಏಕದಿನ ಮತ್ತು ಟಿ20 ತಂಡಗಳಿಗೆ ಹರ್ಮನ್ ಪ್ರೀತ್ ಕೌರ್ ನಾಯಕಿಯಾಗಿ ಉಳಿದಿದ್ದು, ಸ್ಮೃತಿ ಮಂದಾನ ಉಪನಾಯಕಿಯಾಗಿದ್ದಾರೆ.

ಏಕದಿನ ತಂಡ: ಹರ್ಮನ್‌ಪ್ರೀತ್‌ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಷ್ಟಿಕಾ ಭಾಟಿಯಾ  (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್‌ಜೋತ್‌ ಕೌರ್‌, ಶ್ರೇಯಂಕಾ ಪಾಟೀಲ್, ಮನ್ನತ್ ಕಶ್ಯಪ್, ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಕರ್, ಸ್ನೇಹಾ ರಾಣಾ,  ಹರ್ಲಿನ್ ಡಿಯೊಲ್.

ಟಿ20 ತಂಡ: ಹರ್ಮನ್‌ಪ್ರೀತ್‌ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಜೆಮಿಮಾ ರಾಡ್ರಿಗಸ್‌, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಸ್ಟಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್‌ಜೋತ್‌ ಕೌರ್, ಶ್ರೇಯಂಕಾ ಪಾಟೀಲ್, ಮನ್ನತ್ ಕಶ್ಯಪ್, ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಕರ್‌, ಕನಿಕಾ ಅಹುಜಾ, ಮಿನ್ನು ಮಣಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT