ಗಂಗೂಲಿ ಶೀಘ್ರ ಗುಣಮುಖರಾಗಲಿ: ಪ್ರಧಾನಿ ಮೋದಿ ಹಾರೈಕೆ

ನವದೆಹಲಿ: ಲಘು ಹೃದಯಾಘಾತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ.
ಶನಿವಾರ ಗಂಗೂಲಿ ಅವರು ಕೋ್ಲ್ಕತ್ತದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಆಂಜಿಯೊಪ್ಲಾಸ್ಟಿ ಮಾಡಲಾಗಿತ್ತು. ಅವರ ಹೃದಯಕ್ಕೆ ಒಂದು ಸ್ಟೆಂಟ್ ಅಳವಡಿಸಲಾಗಿತ್ತು.
ಪ್ರಧಾನಿ ಮೋದಿಯವರು ಭಾನುವಾರ ಸೌರವ್ ಗಂಗೂಲಿ ಮತ್ತು ಅವರ ಪತ್ನಿ ಡೋನಾ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದರು. ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಪಡೆದು. ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.
’ಗಂಗೂಲಿ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಚೇತರಿಸಿಕೊಂಡಿದ್ದು ಮಾತನಾಡುತ್ತಿದ್ದಾರೆ‘ಎಂದು ವೈದ್ಯರು ತಿಳಿಸಿದ್ದಾರೆ.
ಹೃದಯದ ಮೂರು ಪರಿಧಮನಿ ಅಪಧಮನಿಗಳಲ್ಲಿ ಕೊಬ್ಬಿನಂಶ ಶೇಖರಗೊಂಡಿತ್ತು. ಅದರಿಂದಾಗಿ ಅವರಿಗೆ ಎದೆನೋವು ಕಾಣಿಸಿಕೊಂಡು ಲಘು ಹೃದಯಾಘಾತವಾಗಿತ್ತು ಎಂದು ಶನಿವಾರ ವೈದ್ಯರು ತಿಳಿಸಿದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.