ನವದೆಹಲಿ: ಜಪಾನ್‌ನ ಟೋಕಿಯೊದಲ್ಲಿ ನಡೆಯಲಿರುವ ಈ ಬಾರಿಯ ಒಲಿಂಪಿಕ್ಸ್ ಕ್ರೀಡಾ ಕೂಟದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಅಥ್ಲೀಟ್ ಕ್ರೀಡಾಪಟುಗಳೊಂದಿಗೆ ಜುಲೈ 13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂವಾದ ನಡೆಸಲಿದ್ದಾರೆ.
ಟೋಕಿಯೊಗೆ ತೆರಳುವ ಮೂರು ದಿನಗಳ ಮೊದಲೇ ಮೊದಲ ಬ್ಯಾಚ್ ಅಥ್ಲೀಟ್‌ಗಳೊಂದಿಗೆ ಮೋದಿ ಸಂವಾದ ನಡೆಸಲಿದ್ದಾರೆ. ಕೋವಿಡ್–19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ವರ್ಚುವಲ್ ಆಗಿ ಸಂವಾದವನ್ನು ಆಯೋಜಿಸಲಾಗಿದೆ.
‘ಟೋಕಿಯೊದ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲು ತೆರಳುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ, ಶುಭ ಹಾರೈಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು, ಮೊದಲ ಬ್ಯಾಚ್‌ನ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಭಾರತದ ಒಲಿಂಪಿಕ್ಸ್ ಕ್ರೀಡಾಪಟುಗಳ ಮೊದಲ ಬ್ಯಾಚ್ ಚಾರ್ಟರ್ ಏರ್ ಇಂಡಿಯಾ ವಿಮಾನದಲ್ಲಿ ಟೋಕಿಯೊಗೆ ತೆರಳಲಿದೆ. ಈ ಕ್ರೀಡಾಕೂಟದಲ್ಲಿ ಭಾರತದ 120ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುವ ಸಾಧ್ಯತೆ ಇದೆ. ಆದರೆ, ಎಷ್ಟು ಮಂದಿ ತೆರಳುತ್ತಾರೆಂದು ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ಇನ್ನೂ ಅಧಿಕೃತವಾಗಿ ತಿಳಿಸಿಲ್ಲ.
ಕೋವಿಡ್–19 ಸಾಂಕ್ರಾಮಿಕದ ಕಾರಣದಿಂದಾಗಿ, ಈ ಬಾರಿ ಪ್ರೇಕ್ಷಕರಿಲ್ಲದೇ ಒಲಿಂಪಿಕ್ಸ್ ಕ್ರೀಡಾಕೂಟ ನಡೆಸಲಾಗುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.