ಶನಿವಾರ, ಜುಲೈ 31, 2021
27 °C

ಮಧುಶಂಕ ಪೊಲೀಸ್‌ ಕಸ್ಟಡಿ ಅವಧಿ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ಕೊಲಂಬೊ: ಮಾದಕ ವಸ್ತು ಹೊಂದಿದ್ದ ಆರೋಪದಲ್ಲಿ ಬಂಧಿತನಾಗಿರುವ ಶ್ರೀಲಂಕಾ ಕ್ರಿಕೆಟಿಗ ಶೆಹಾನ್‌ ಮಧುಶಂಕ ಅವರ ಪೊಲೀಸ್‌ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿದೆ. ಜೂನ್‌ 9ರವರೆಗೆ ಅವರು ಪೊಲೀಸ್‌ ವಿಚಾರಣೆ ಎದುರಿಸಲಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

25 ವರ್ಷದ ಮಧುಶಂಕ ಹಾಗೂ ಅವರ ಗೆಳೆಯನೊಬ್ಬನನ್ನು ಮೇ 23ರಂದು ಬಂಧಿಸಲಾಗಿತ್ತು. ಅವರ ಬಳಿ ಎರಡು ಗ್ರಾಮ್‌ನಷ್ಟು ಹೆರಾಯಿನ್‌ ಪತ್ತೆಯಾಗಿತ್ತು. ಜೂನ್‌ 2ರವರೆಗೆ ಅವರನ್ನು ಪೊಲೀಸ್‌ ಕಸ್ಟಡಿಯಲ್ಲಿರಿಸಲಾಗಿತ್ತು.

ಶ್ರೀಲಂಕಾ ಕ್ರಿಕೆಟ್‌ ಇತಿಹಾಸದಲ್ಲೇ ಮಾದಕವಸ್ತು ಪ್ರಕರಣದಲ್ಲಿ ಪೊಲೀಸ್‌ ವಿಚಾರಣೆ ಎದುರಿಸುತ್ತಿರುವ ಮಂಡಳಿಯ ಗುತ್ತಿಗೆ ಹೊಂದಿದ ಮೊದಲ ಆಟಗಾರ ಎಂಬ ಕುಖ್ಯಾತಿ ಮಧುಶಂಕ ಮೇಲಿದೆ.

ಶ್ರೀಲಂಕಾ ಕ್ರಿಕೆಟ್‌ ಮಂಡಳಿಯು (ಎಸ್‌ಎಲ್‌ಸಿ) ಸದ್ಯ ಮಧುಶಂಕ ಅವರ ಗುತ್ತಿಗೆ ಒಪ್ಪಂದವನ್ನು ರದ್ದುಗೊಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು