ಶನಿವಾರ, ಆಗಸ್ಟ್ 15, 2020
21 °C

ರಿಷಭ್‌ಗೆ ಸಿಗದ ಸ್ಥಾನ: ರಿಕಿ ಅಚ್ಚರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಿಷಭ್‌ ಪಂತ್ ಅವರು ವಿಶ್ವಕಪ್‌ ತಂಡದಲ್ಲಿ ಸ್ಥಾನ ನೀಡದಿರುವುದಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ನ ಮುಖ್ಯ ಕೋಚ್‌ ರಿಕಿ ಪಾಂಟಿಂಗ್‌ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ವಿಶ್ವಕಪ್‌ನಲ್ಲಿ ರಿಷಭ್‌ಗೆ ಸ್ಥಾನ ನೀಡಿದ್ದರೆ ಭಾರತದ ಬ್ಯಾಟಿಂಗ್‌ ಶಕ್ತಿಗೆ ಮತ್ತಷ್ಟು ಬಲ ಬಂದಂತಾಗುತ್ತಿತ್ತು. ಕನಿಷ್ಟ ಮೂರು ವಿಶ್ವಕಪ್‌ನಲ್ಲಿ ಭಾಗವಹಿಸುವ ಸಾಮರ್ಥ್ಯ ಪಂತ್ ಅವರಲ್ಲಿತ್ತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿರಾಸೆಗೊಳ್ಳದೆ ಮುಂಬರುವ ಪಂದ್ಯಗಳಲ್ಲಿ ಉತ್ತಮ ಸಾಧನೆ ಮಾಡಲು ಪಂತ್‌ಗೆ ಸಲಹೆ ನೀಡಿದ್ದಾಗಿ ತಿಳಿಸಿದ ಪಾಂಟಿಂಗ್‌, ಡೆಲ್ಲಿ ತಂಡ ಈ ಬಾರಿಯ ಐಪಿಎಲ್‌ ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು