ಆಸ್ಟ್ರೇಲಿಯಾ ಎದುರಿನ ಟಿ20 ಸರಣಿ: ರಾಜೇಶ್ವರಿಗೆ ಸ್ಥಾನ, ಪೂಜಾ ಅಲಭ್ಯ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಟಿ20 ಕ್ರಿಕೆಟ್ ಸರಣಿಗೆ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಕರ್ನಾಟಕದ ರಾಜೇಶ್ವರಿ ಗಾಯಕವಾಡ ಸ್ಥಾನ ಗಿಟ್ಟಿಸಿದ್ದಾರೆ. ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಪೂಜಾ ವಸ್ತ್ರಕಾರ್ ಅವರನ್ನು ಆಯ್ಕೆ ಮಾಡಿಲ್ಲ.
ಐದು ಪಂದ್ಯಗಳ ಟಿ20 ಸರಣಿಯು ಮುಂಬೈನಲ್ಲಿ ಡಿಸೆಂಬರ್ 9ರಂದು ಮುಂಬೈನಲ್ಲಿ ಆರಂಭವಾಗಲಿದೆ. ಹರ್ಮನ್‌ಪ್ರೀತ್ ಕೌರ್ ಅವರು ತಂಡದ ನಾಯಕಿಯಾಗಿದ್ದಾರೆ. ಆಂಧ್ರದ ಎಡಗೈ ಮಧ್ಯಮವೇಗಿ ಅಂಜಲಿ ತಂಡಕ್ಕೆ ಆಯ್ಕೆಯಾಗಿರುವ ಹೊಸಮುಖ.
ತಂಡ ಇಂತಿದೆ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ಯಷ್ಟಿಕಾ ಭಾಟಿಯಾ (ವಿಕೆಟ್ ಕೀಪರ್), ಜೆಮಿಮಾ ರಾಡ್ರಿಗಸ್, ದೀಪ್ತಿ ಶರ್ಮಾ, ರಾಧಾ ಯಾದವ್, ರಾಜೇಶ್ವರಿ ಗಾಯಕವಾಡ, ರೇಣುಕಾ ಸಿಂಗ್ ಠಾಕೂರ್, ಮೇಘನಾ ಸಿಂಗ್, ಅಂಜಲಿ ಸರ್ವಾನಿ, ದೇವಿಕಾ ವೈದ್ಯ, ಎಸ್. ಮೇಘನಾ, ರಿಚಾ ಘೋಷ್ (ವಿಕೆಟ್ ಕೀಪರ್) ಮತ್ತು ಹರ್ಲೀನ್ ಡಿಯೊಲ್.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.