ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರತ ‘ಎ’ ತಂಡಕ್ಕೆ ಪೊವಾರ್‌ ಬೌಲಿಂಗ್‌ ಕೋಚ್‌

Last Updated 27 ಆಗಸ್ಟ್ 2019, 16:40 IST
ಅಕ್ಷರ ಗಾತ್ರ

ಮುಂಬೈ: ಹಿರಿಯ ಆಫ್‌ಸ್ಪಿನ್ನರ್‌ ರಮೇಶ್‌ ಪೊವಾರ್‌ ಅವರನ್ನು ಭಾರತ ‘ಎ’ ತಂಡದ ಬೌಲಿಂಗ್‌ ಕೋಚ್‌ ಆಗಿ ನೇಮಿಸಲಾಗಿದೆ. ಈ ವಿಷಯವನ್ನು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ತಿಳಿಸಿದೆ.

ಪೊವಾರ್ ಅವರು ಮುಂಬರುವ ದಕ್ಷಿಣ ಆಫ್ರಿಕಾ ‘ಎ’ ವಿರುದ್ಧದ ಸರಣಿಯಲ್ಲಿ ಮಾತ್ರ ತಂಡಕ್ಕೆ ಮಾರ್ಗದರ್ಶನ ನೀಡಲಿದ್ದಾರೆ.

ಭಾರತದ ಪರ ಎರಡು ಟೆಸ್ಟ್‌ ಮತ್ತು 31 ಏಕದಿನ ಪಂದ್ಯಗಳನ್ನು ಆಡಿರುವ ಪೊವಾರ್‌, ಈ ಹಿಂದೆ ಭಾರತ ಮಹಿಳಾ ತಂಡದ ಮುಖ್ಯ ಕೋಚ್‌ ಆಗಿ ಕೆಲಸ ಮಾಡಿದ್ದರು.

ಭಾರತ ‘ಎ’ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕು ದಿನಗಳ ಎರಡು ‘ಟೆಸ್ಟ್‌’ ಹಾಗೂ ಐದು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ.ಏಕದಿನ ಸರಣಿ ಇದೇ 29ರಿಂದ ತಿರುವನಂತಪುರದಲ್ಲಿ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT