ಮಂಗಳವಾರ, ಮಾರ್ಚ್ 31, 2020
19 °C

ಪಿಪಿಎಲ್: ಬೆಂಗಳೂರು ಬುಲ್ಸ್ ಚಾಂಪಿಯನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿದ್ಯುನ್ಮಾನ ಮಾಧ್ಯಮ ರಾಜಕೀಯ ವರದಿಗಾರರು ಆಯೋಜಿಸಿದ್ದ ಪಿಪಿಎಲ್ (ಪೊಲಿಟಿಕಲ್ ಪ್ರಿಮಿಯರ್ ಲೀಗ್) ಕ್ರಿಕೆಟ್ ಟೂರ್ನಿಯಲ್ಲಿ ಬೆಂಗಳೂರು ಬುಲ್ಸ್ ತಂಡ ಭಾನುವಾರ ಚಾಂಪಿಯನ್‌ ಪಟ್ಟ ಧರಿಸಿತು.

ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ ಫೈನಲ್‌ನಲ್ಲಿ ಬೆಂಗಳೂರು ಬುಲ್ಸ್ ತಂಡ ಪೀಪಲ್ಸ್ ಚಾಯ್ಸ್ ತಂಡವನ್ನು 8 ರನ್‌ಗಳಿಂದ ಸೋಲಿಸಿತು. ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ನೈಟ್ ರೈಡರ್ಸ್ ತಂಡವು ಸೂಪರ್ ಸುನಾಮಿ ತಂಡವನ್ನು ಮಣಿಸಿತು.
ಟೂರ್ನಿಯಲ್ಲಿ ನಾಲ್ಕು ತಂಡಗಳು ಪಾಲ್ಗೊಂಡಿದ್ದವು.
ಲೀಗ್ ಹಂತದಲ್ಲಿ ರವೀಶ್ ನಾಯಕತ್ವದ ಬೆಂಗಳೂರು ಬುಲ್ಸ್ ತಂಡವು ಆನಂದ್ ಬೈದನಮನೆ ನೇತೃತ್ವದ ನೈಟ್ ರೈಡರ್ಸ್ ತಂಡವನ್ನು  ಹಾಗೂ ಚಿದಾನಂದ ಪಟೇಲ್ ನಾಯಕತ್ವದ ಪೀಪಲ್ಸ್ ಚಾಯ್ಸ್ ತಂಡವು ನ. ವಿನಯ್ ಮುಂದಾಳತ್ವದ ಸೂಪರ್ ಸುನಾಮಿ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದವು.
ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಟೂರ್ನಿಗೆ ಚಾಲನೆ ನೀಡಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು