ಶುಕ್ರವಾರ, ಮೇ 29, 2020
27 °C

ಗುಣಮುಖರಾಗುತ್ತಿರುವ ಪೃಥ್ವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಅಡಿಲೇಡ್‌: ಗಾಯಗೊಂಡಿದ್ದ ಪೃಥ್ವಿ ಶಾ ಅವರು ಚೇತರಿಸಿಕೊಂಡಿದ್ದು ಸೋಮವಾರ ದೈಹಿಕ ಕಸರತ್ತು ನಡೆಸಿದ್ದಾರೆ. ಹಿಗಾಗಿ ಮೂರನೇ ಪಂದ್ಯಕ್ಕೆ ಲಭ್ಯವಾಗುವ ಸಾಧ್ಯತೆ ಇದೆ. 19 ವರ್ಷದ ಶಾ ಕ್ರಿಕೆಟ್‌ ಆಸ್ಟ್ರೇಲಿಯಾ ಇಲೆವನ್ ಎದುರಿನ ಅಭ್ಯಾಸ ಪಂದ್ಯದ ಸಂದರ್ಭದಲ್ಲಿ ಹಿಂಗಾಲಿಗೆ ಗಾಯಗೊಂಡಿದ್ದರು. ಹೀಗಾಗಿ ಮೊದಲ ಪಂದ್ಯದಲ್ಲಿ ಆಡಿರಲಿಲ್ಲ.

ಅಕ್ಟೋಬರ್‌ನಲ್ಲಿ ನಡೆದಿದ್ದ ವೆಸ್ಟ್ ಇಂಡೀಸ್ ಎದುರಿನ ಪಂದ್ಯದಲ್ಲಿ ಶಾ ಶತಕ ಸಿಡಿಸಿದ್ದರು. ಪದಾರ್ಪಣೆ ಪಂದ್ಯದಲ್ಲಿ 134 ರನ್ ಗಳಿಸಿದ ಅವರು ಈ ಸಾಧನೆ ಮಾಡಿದ ಭಾರತದ ಅತಿ ಕಿರಿಯ ಆಟಗಾರ ಎಂದೆನಿಸಿಕೊಂಡಿದ್ದರು.

ಗಾಯದಿಂದ ಗುಣಮುಖರಾಗುತ್ತಿದ್ದರೂ ಪರ್ತ್‌ನಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ಅವರು ಆಡುವುದು ಸಂದೇಹ. ಆದರೆ ಇದೇ 26ರಂದು ಆರಂಭವಾಗಲಿರುವ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

‘ಶಾ ಅವರು ಬೇಗನೇ ಗುಣಮುಖರಾಗುವ ಲಕ್ಷಣಗಳು ಗೋಚರಿಸುತ್ತಿವೆ’ ಎಂದು ತಂಡದ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು