ಶುಕ್ರವಾರ, ಏಪ್ರಿಲ್ 23, 2021
30 °C

ವಿಜಯ್ ಹಜಾರೆ ಟ್ರೋಫಿಯಲ್ಲಿ ಸ್ಫೋಟಕ 227 ರನ್ ಬಾರಿಸಿ ದಾಖಲೆ ಬರೆದ ಪೃಥ್ವಿ ಶಾ

ಪಿಟಿಐ Updated:

ಅಕ್ಷರ ಗಾತ್ರ : | |

ಜೈಪುರ: ವಿಜಯ್ ಹಜಾರೆ ಟ್ರೋಫಿ ದೇಶೀಯ ಏಕದಿನ ಟೂರ್ನಿಯಲ್ಲಿ ಮುಂಬೈ ತಂಡದ ಬ್ಯಾಟ್ಸ್‌ಮನ್ ಪೃಥ್ವಿ ಶಾ, ದಾಖಲೆಯ ಅಜೇಯ 227 ರನ್ ಬಾರಿಸಿ ದಾಖಲೆ ಬರೆದಿದ್ದಾರೆ.

ಎಲೈಟ್ ಡಿ ಗುಂಪಿನಲ್ಲಿ ಜೈಪುರದಲ್ಲಿ ಗುರುವಾರ ಪುದುಚೇರಿ ವಿರುದ್ಧ ನಡೆದ ಪಂದ್ಯದಲ್ಲಿ ಪೃಥ್ವಿ ಶಾ ಭರ್ಜರಿ ದ್ವಿಶತಕದ ನೆರವಿನಿಂದ ಮುಂಬೈ ತಂಡವು ನಾಲ್ಕು ವಿಕೆಟ್ ನಷ್ಟಕ್ಕೆ 457 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿದೆ.

ಸಂಜು ದಾಖಲೆ ಮುರಿದ ಪೃಥ್ವಿ...
ವಿಜಯ್ ಹಜಾರೆ ಟ್ರೋಫಿಯಲ್ಲಿ ವೈಯಕ್ತಿಕ ಗರಿಷ್ಠ ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಕೇರಳದ ಸಂಜು ಸ್ಯಾಮ್ಸನ್ ಹೆಸರಲ್ಲಿದ್ದ ದಾಖಲೆಯನ್ನು ಪೃಥ್ವಿ ಶಾ ಮುರಿದಿದ್ದಾರೆ.

ಪೃಥ್ವಿ ಶಾ 152 ಎಸೆತಗಳಲ್ಲಿ 227 ರನ್ ಗಳಿಸಿ ಔಟಾಗದೆ ಉಳಿದರು. ಅವರ ಸೊಗಸಾದ ಇನ್ನಿಂಗ್ಸ್‌ನಲ್ಲಿ 32 ಬೌಂಡರಿ ಹಾಗೂ ಐದು ಸಿಕ್ಸರ್‌ಗಳು ಸೇರಿದ್ದವು. ದೆಹಲಿ ವಿರುದ್ಧ ನಡೆದ ಮೊದಲ ಪಂದ್ಯದಲ್ಲೂ ಪೃಥ್ವಿ ಶಾ ಶತಕ ದಾಖಲಿಸಿದ್ದರು.

2019ರಲ್ಲಿ ಗೋವಾ ವಿರುದ್ಧ ಸಂಜು ಸ್ಯಾಮ್ಸನ್ ಅಜೇಯ 212 ರನ್ ಗಳಿಸಿರುವುದು ಈ ವರೆಗಿನ ದಾಖಲೆಯಾಗಿತ್ತು.

ಇದನ್ನೂ ಓದಿ: 

ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಪೃಥ್ವಿ ಶಾ ದಾಖಲಿಸಿದ ಮೊದಲ ದ್ವಿಶತಕ ಇದಾಗಿದೆ. ಭಾರತ ತಂಡವನ್ನು ತಲಾ ಐದು ಟೆಸ್ಟ್ ಹಾಗೂ ಏಕದಿನಗಳಲ್ಲಿ ಪ್ರತಿನಿಧಿಸಿರುವ 21ರ ಹರೆಯದ ಪೃಥ್ವಿ, ತಮ್ಮನ್ನು ಕೈಬಿಟ್ಟಿರುವ ಆಯ್ಕೆದಾರರಿಗೆ ಬ್ಯಾಟ್ ಮೂಲಕವೇ ಉತ್ತರಿಸಿದರು.

ವಿಜಯ್ ಹಜಾರೆ ಟ್ರೋಫಿ ಇತಿಹಾಸದಲ್ಲಿ ದಾಖಲಾದ ನಾಲ್ಕನೇ ದ್ವಿಶತಕ ಸಾಧನೆ ಇದಾಗಿದೆ.

ನಿಮ್ಮ ಮಾಹಿತಿಗಾಗಿ, ಲಿಸ್ಟ್ ಎ ಕ್ರಿಕೆಟ್‌ನಲ್ಲಿ ವೈಯಕ್ತಿಕವಾಗಿ ಅತಿ ಹಚ್ಚು ರನ್ ಗಳಿಸಿದ ದಾಖಲೆ ಅಲಿ ಬ್ರೌನ್ (268) ಹೆಸರಲ್ಲಿದೆ.

ಇನ್ನೊಂದೆಡೆ ಈಗಷ್ಟೇ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಭಾರತ ಟಿ20 ತಂಡಕ್ಕೆ ಆಯ್ಕೆಯಾಗಿರುವ ಸೂರ್ಯಕುಮಾರ್ ಯಾದವ್ ಕೇವಲ 58 ಎಸೆತಗಳಲ್ಲಿ 22 ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ನೆರವಿನಿಂದ 133 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು