ಗುರುವಾರ , ಫೆಬ್ರವರಿ 27, 2020
19 °C

ಟೆಸ್ಟ್ ತಂಡಕ್ಕೆ ಮರಳಿದ ಶಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಹ್ಯಾಮಿಲ್ಟನ್: ಆರಂಭಿಕ ಬ್ಯಾಟ್ಸ್‌ಮನ್ ಪೃಥ್ವಿ ಶಾ ಭಾರತ ಟೆಸ್ಟ್ ತಂಡಕ್ಕೆ ಮರಳಿದ್ದಾರೆ.

ನ್ಯೂಜಿಲೆಂಡ್ ಎದುರು ನಡೆಯಲಿರುವ ಎರಡು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ ಅವರು ಆಡಲಿದ್ದಾರೆ. ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಇಬ್ಬರೂ ಗಾಯಗೊಂಡಿರುವುದರಿಂದ ಮಯಂಕ್ ಅಗರವಾಲ್ ಅವರೊಂದಿಗೆ ಪೃಥ್ವಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಫೆಬ್ರುವರಿ 21ರಂದು ಮೊದಲ ಪಂದ್ಯವು ವೆಲ್ಲಿಂಗ್ಟನ್‌ನಲ್ಲಿ ನಡೆಯಲಿದೆ.

2018ರ ಅಕ್ಟೋಬರ್‌ನಲ್ಲಿ ಪೃಥ್ವಿ ಶಾ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ವೆಸ್ಟ್ ಇಂಡೀಸ್ ವಿರುದ್ಧ ರಾಜ್‌ಕೋಟ್‌ನಲ್ಲಿ ಪದಾರ್ಪಣೆ ಮಾಡಿದ್ದ ಪಂದ್ಯದಲ್ಲಿಯೇ ಶತಕ ಬಾರಿಸಿದ್ದರು. ಒಟ್ಟು ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈಚೆಗೆ ಭಾರತ ‘ಎ’ ತಂಡದಲ್ಲಿ ಆಡಿದ್ದ ಅವರು ನ್ಯೂಜಿಲೆಂಡ್ ಇಲೆವನ್ ಎದುರಿನ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 150 ರನ್‌ ಗಳಿಸಿದ್ದರು. ಅವರೊಂದಿಗೆ 19 ವರ್ಷದೊಳಗಿನವರ ತಂಡದಲ್ಲಿ ಆಡಿದ್ದ ಶುಭಮನ್ ಗಿಲ್ ಕೂಡ ಸ್ಥಾನ ಪಡೆದಿದ್ದಾರೆ. ಅವರು ಕೂಡ ‘ಎ’ ತಂಡದ ಪರ ದ್ವಿಶತಕ ಹೊಡೆದಿದ್ದರು.

ಸೀಮಿತ ಓವರ್‌ಗಳಲ್ಲಿ ಉತ್ತಮ ಬೌಲಿಂಗ್ ಮೂಲಕ ಗಮನ ಸೆಳೆದಿರುವ ಮಧ್ಯಮವೇಗಿ ನವದೀಪ್ ಸೈನಿ ಕೂಡ ಟೆಸ್ಟ್ ಬಳಗಕ್ಕೆ ಕಾಲಿಟ್ಟಿದ್ದಾರೆ. ಈಚೆಗೆ ರಣಜಿ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಗಾಯಗೊಂಡಿದ್ದ ಇಶಾಂತ್ ಶರ್ಮಾ ಅವರನ್ನು ಆಯ್ಕೆ ಪರಿಗಣಿಸಲಾಗಿದೆ. ಆದರೆ, ಅವರು ಫಿಟ್‌ನೆಸ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

 ತಂಡ: ವಿರಾಟ್ ಕೊಹ್ಲಿ (ನಾಯಕ), ಮಯಂಕ್ ಅಗರವಾಲ್, ಪೃಥ್ವಿ ಶಾ, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಹನುಮವಿಹಾರಿ, ವೃದ್ಧಿಮಾನ್ ಸಹಾ (ವಿಕೆಟ್‌ಕೀಪರ್), ರಿಷಭ್ ಪಂತ್ (ವಿಕೆಟ್‌ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜ, ಜಸ್‌ಪ್ರೀತ್ ಬೂಮ್ರಾ, ಉಮೇಶ್ ಯಾದವ್, ಮೊಹಮ್ಮದ್ ಶಮಿ,  ನವದೀಪ್ ಸೈನಿ, ಇಶಾಂತ್ ಶರ್ಮಾ (ಫಿಟ್‌ನೆಸ್‌ ಟೆಸ್ಟ್ ಉತ್ತೀರ್ಣರಾದರೆ ಮಾತ್ರ).

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು