ಶುಕ್ರವಾರ, ಏಪ್ರಿಲ್ 10, 2020
19 °C

ಪಿಎಸ್‌ಎಲ್‌: 100 ಮಂದಿಗೆ ಕೊರೊನಾ ಸೋಂಕು ಪರೀಕ್ಷೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕರಾಚಿ: ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಕ್ರಿಕೆಟ್ ಟೂರ್ನಿಗೆ ಸಂಬಂಧಪಟ್ಟ 100 ಮಂದಿಯನ್ನು ಕೊರೊನಾ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿದೆ. ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿದೆ.

ಕೊರೊನಾ ಭೀತಿಯಿಂದಾಗಿ ಪಾಕ್‌ ಕ್ರಿಕೆಟ್‌ ಮಂಡಳಿ ಮಂಗಳವಾರ ಪಿಎಸ್‌ಎಲ್ ಟೂರ್ನಿಯನ್ನು ಮುಂದೂಡಿತ್ತು. ಇಂಗ್ಲೆಂಡ್‌ನ ಆಟಗಾರ ಅಲೆಕ್ಸ್‌ ಹೇಲ್ಸ್ ಅವರಲ್ಲಿ ಸೋಂಕು ಲಕ್ಷಣ ಕಂಡುಬಂದಿತ್ತು ಎಂದು ಮಾಜಿ ಆಟಗಾರ ವೀಕ್ಷಕ ವಿವರಣೆಗಾರ ರಮೀಜ್‌ ರಾಜಾ ಬಹಿರಂಗಪಡಿಸಿದ್ದರು. 

ಆಟಗಾರರು ಮತ್ತಿತರ ಸಿಬ್ಬಂದಿ ಸೇರಿದಂತೆ ಒಟ್ಟು ನೂರು ಮಂದಿಯಲ್ಲಿ ಸೋಂಕು ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಪರೀಕ್ಷೆಗೊಳಪಡಿಸಲಾಗಿದೆ ಎಂದು ಮಂಡಳಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು