ಲಾಹೋರ್: ಪಶ್ಚಿಮ ಏಷ್ಯಾದ ಸಂಘರ್ಷದ ಕಾರಣದಿಂದಾಗಿ ಈ ಬಾರಿಯ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್ಎಲ್) ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಮೈದಾನದೊಳಗೆ ಪ್ರೇಕ್ಷಕರಿಗೆ ಪ್ರವೇಶವಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಬೋರ್ಡ್(ಪಿಸಿಬಿ) ತಿಳಿಸಿದೆ.

‘ಪಿಎಸ್ಎಲ್ ಟೂರ್ನಿಯು ಅಂತರರಾಷ್ಟ್ರೀಯ ಬ್ರ್ಯಾಂಡ್ ಆಗಿದೆ. ಅದು ನಮ್ಮ ಹೆಮ್ಮೆ. ಈ ಬಾರಿಯ ಟೂರ್ನಿಯು ಮಾರ್ಚ್ 26ರಿಂದ ಆರಂಭವಾಗಲಿದೆ. ಆದರೆ, ಯುದ್ಧದ ಕಾರಣದಿಂದ ಪ್ರೇಕ್ಷಕರಿಲ್ಲದೆ ಪಂದ್ಯಗಳು ನಡೆಯಲಿವೆ’ ಎಂದು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಕ್ವಿ ಹೇಳಿದ್ದಾರೆ.

ಪಿಎಸ್ಎಲ್ ಟೂರ್ನಿಯ 11ನೇ ಆವೃತ್ತಿಯನ್ನು ಎರಡು ಮೈದಾನಗಳಿಗಷ್ಟೇ ಸೀಮಿತಗೊಳಿಸಲಾಗಿದೆ. ಲಾಹೋರ್ ಮತ್ತು ಕರಾಚಿಯಲ್ಲಿ ಪಂದ್ಯಗಳು ಜರುಗಲಿವೆ ಎಂದು ಹೇಳಿದ್ದಾರೆ.

ಸರ್ಕಾರದ ಆದೇಶದ ಪ್ರಕಾರ, ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಉದ್ಘಾಟನಾ ಕಾರ್ಯಕ್ರಮವನ್ನು ಕೂಡ ರದ್ದುಗೊಳಿಸಲಾಗಿದೆ. ಆದರೆ, ಯಾವುದೇ ಭದ್ರತಾ ಸಮಸ್ಯೆ ಇಲ್ಲ. ಇಂದು(ಮಾ.22) ರಾತ್ರಿಯಿಂದಲೇ ವಿದೇಶಿ ಆಟಗಾರರು ಪಾಕಿಸ್ತಾನಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.

ಮೈದಾನದೊಳಗೆ ಪ್ರೇಕ್ಷಕರಿಗೆ ಪ್ರವೇಶವಿಲ್ಲದ ಕಾರಣ, ಅದರಿಂದ ಫ್ರಾಂಚೈಸಿಗಳಿಗೆ ಉಂಟಾಗುವ ನಷ್ಟವನ್ನು ಪಿಸಿಬಿ ತುಂಬಿಸಿ ಕೊಡಲಿದೆ ಎಂದು ತಿಳಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನಲ್ಲಿ ಭಾಗವಹಿಸುವುದಕ್ಕಾಗಿ ಪಿಎಸ್ಎಲ್ ಒಪ್ಪಂದವನ್ನು ಉಲ್ಲಂಘನೆ ಮಾಡಿರುವ ಆಟಗಾರರ ವಿರುದ್ಧ ಪಿಸಿಬಿ ಕಾನೂನು ವಿಭಾಗವು ಪ್ರಕರಣವನ್ನು ದಾಖಲಿಸುತ್ತದೆ. ಆದರೆ, ಅತ್ಯುತ್ತಮ ಆಟಗಾರರು ಪಿಎಸ್ಎಲ್ ಟೂರ್ನಿಯಲ್ಲಿ ಭಾಗವಹಿಸುತ್ತಿರುವುದು ಟೂರ್ನಿಯ ಬೆಳವಣಿಗೆಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನವು ಇರಾನ್ನೊಂದಿಗೆ ಗಡಿ ಹಂಚಿಕೊಂಡಿದ್ದು, ಫೆ.28ರಂದು ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಜಂಟಿ ಕಾರ್ಯಾಚರಣೆ ನಡೆಸಿದ ಬಳಿಕ ಸಂಘರ್ಷ ಉಂಟಾಗಿದೆ.

ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನ ಗಡಿ ಸಂಘರ್ಷವು ಕೂಡ ಬೂದಿ ಮುಚ್ಚಿದ ಕೆಂಡದಂತಿದೆ. ಪಿಎಸ್ಎಲ್ ಟೂರ್ನಿಯ ವೇಳೆ ತಾಲಿಬಾನ್ ದಾಳಿ ಮಾಡುವ ಭೀತಿ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.