ಮಂಗಳವಾರ, ಏಪ್ರಿಲ್ 20, 2021
32 °C

ಮುಚ್ಚಿದ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿರುವ ಭಾರತ-ಇಂಗ್ಲೆಂಡ್ ಏಕದಿನ ಸರಣಿ

ಪಿಟಿಐ Updated:

ಅಕ್ಷರ ಗಾತ್ರ : | |

ಪುಣೆ: ಮಹಾರಾಷ್ಟ್ರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಪುಣೆಯಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಮುಚ್ಚಿದ ಕ್ರೀಡಾಂಗಣದಲ್ಲಿ ಆಯೋಜಿಸಲು ಮಹಾರಾಷ್ಟ್ರ ರಾಜ್ಯ ಕ್ರಿಕೆಟ್ ಸಂಸ್ಥೆ ನಿರ್ಧರಿಸಿದೆ.

ಪುಣೆಯಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯು ಅನುಕ್ರಮವಾಗಿ ಮಾರ್ಚ್ 23, 26 ಹಾಗೂ 28ರಂದು ನಿಗದಿಯಾಗಿದೆ

ಮಹಾರಾಷ್ಟ್ರದಲ್ಲಿ ಕೋವಿಡ್-19 ಪ್ರಕರಣವು ಹೆಚ್ಚುತ್ತಿರುವುದರ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಅವರ ಸೂಚನೆ ಮೇರೆಗೆ ಪ್ರೇಕ್ಷಕರು ಇಲ್ಲದೆ ಏಕದಿನ ಸರಣಿಗೆ ಅನುಮತಿ ನೀಡಲಾಗುವುದು ಎಂದು ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತ-ಇಂಗ್ಲೆಂಡ್ ಏಕದಿನ ಸರಣಿ ಆಯೋಜನೆ ಕುರಿತಂತೆ ಎಂಸಿಎ ಅಧ್ಯಕ್ಷ ಕಾಕಟ್ಕರ್, ಆಡಳಿತ ಮಂಡಳಿ ಮುಖ್ಯಸ್ಥ ಮಿಲಿಂದ್ ನಾರ್ವೆಕರ್ ಅವರು ಮುಖ್ಯಮಂತ್ರಿ ಉದ್ದವ್ ಠಾಕ್ರೆ ಮತ್ತು ಪ್ರವಾಸೋದ್ಯಮ ಹಾಗೂ ಪರಿಸರ ಸಚಿವ ಆದಿತ್ಯಜೀ ಠಾಕ್ರೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಇದನ್ನೂ ಓದಿ: 

ಆಟಗಾರರು ಅಧಿಕಾರಿಗಳಿಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಅಗತ್ಯ ಮುನ್ನಚ್ಚೆರಿಕೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎಂಬುದನ್ನು ಸಂಸ್ಥೆಯು ತಿಳಿಸಿದೆ.

ಇದರೊಂದಿಗೆ ಪುಣೆಯಲ್ಲಿ ಏಕದಿನ ಪಂದ್ಯಗಳನ್ನು ಆಯೋಜಿಸುವುದಕ್ಕೆ ಸಂಬಂಧಿಸಿದಂತೆ ಎದ್ದಿರುವ ಅನಿಶ್ಚಿತತೆಯು ದೂರವಾಗಲಿದ್ದು, ಪಂದ್ಯಗಳನ್ನು ಸುಗಮವಾಗಿ ಆಯೋಜಿಸಲು ಪೂರ್ವಸಿದ್ಧತೆಯನ್ನು ಪ್ರಾರಂಭಿಸಬಹುದಾಗಿದೆ ಎಂದು ಹೇಳಿದೆ.

ಇದೇ ಸಂದರ್ಭದಲ್ಲಿ ಬಿಸಿಸಿಐ, ಐಸಿಸಿ ಹಾಗೂ ಎಂಸಿಎ ಮಾಜಿ ಅಧ್ಯಕ್ಷ ಶರದ್ ಪವಾರ್ ಅವರು ನೀಡಿರುವ ಮಾರ್ಗದರ್ಶನ ಹಾಗೂ ನೆರವಿಗೂ ಸಂಸ್ಥೆಯು ಧನ್ಯವಾದ ಸಲ್ಲಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು