ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯ ಕೋಚ್ ಆಗಿ ಅನಿಲ್ ಕುಂಬ್ಳೆ ಮುಂದುವರಿಸದಿರಲು ಪಂಜಾಬ್ ಕಿಂಗ್ಸ್ ನಿರ್ಧಾರ

Last Updated 26 ಆಗಸ್ಟ್ 2022, 4:47 IST
ಅಕ್ಷರ ಗಾತ್ರ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ ಪಂಜಾಬ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಅನಿಲ್ ಕುಂಬ್ಳೆ ಅವರನ್ನು ಮುಂದುವರಿಸದಿರಲು ನಿರ್ಧರಿಸಿದೆ.

ಅನಿಲ್ ಕುಂಬ್ಳೆ ಅವರ ಮುಖ್ಯ ಕೋಚ್ ಗುತ್ತಿಗೆ ಅವಧಿ ಮುಗಿಯಲಿದ್ದು, ಮುಂದಿನ ಅವಧಿಗೆ ಮುಂದುವರಿಸಲು ಪಂಜಾನ್ ಕಿಂಗ್ಸ್ ತಂಡ ಒಲವು ಹೊಂದಿಲ್ಲ.

ಈ ಕುರಿತು ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿ ಮಾಡಿದ್ದು, ಪಂಜಾಬ್ ಕಿಂಗ್ಸ್ ತಂಡದ ಮಾಲೀಕರ ಮಂಡಳಿ, ಕುಂಬ್ಳೆ ಅವರನ್ನು ಮುಂದುವರಿಸದಿರಲು ನಿರ್ಧರಿಸಿದೆ ಎಂದು ಹೇಳಿದೆ.

ಟೀಮ್ ಇಂಡಿಯಾದ ಮಾಜಿ ಕ್ಯಾಪ್ಟನ್ ಅನಿಲ್ ಕುಂಬ್ಳೆ ಅವರು 2020ರ ಐಪಿಎಲ್ ಸೀಸನ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಆಗಿ ನೇಮಕವಾಗಿದ್ದರು.

ಕುಂಬ್ಳೆ ಅವಧಿಯಲ್ಲಿ ಪಂಜಾಬ್ ಕಿಂಗ್ಸ್ ತಂಡ 42 ಪಂದ್ಯ ಆಡಿದ್ದು, ಅದರಲ್ಲಿ 18 ಗೆಲುವು ಮತ್ತು 22 ಸೋಲು ದಾಖಲಿಸಿದ್ದು, ಎರಡು ಪಂದ್ಯ ಟೈ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT