ಶುಕ್ರವಾರ, ಮೇ 20, 2022
19 °C

ಪಿವಿಆರ್ ಸಿನೆಮಾದಲ್ಲಿ ಐಸಿಸಿ ವಿಶ್ವಕಪ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ (ಪಿಟಿಐ): ಟ್ವೆಂಟಿ–20 ವಿಶ್ವಕಪ್ ಟೂರ್ನಿಯ ಪಂದ್ಯಗಳ ನೇರಪ್ರಸಾರ ಮಾಡಲು ಪಿವಿಆರ್ ಸಿನಿಮಾ ಮಲ್ಟಿಪ್ಲೆಕ್ಸ್‌ನಲ್ಲಿ ಪ್ರಸಾರವಾಗಲಿವೆ.

ಇದೇ 17ರಿಂದ ನವೆಂಬರ್ 14ರವರೆಗೆ ಯುಎಇ ಮತ್ತು ಒಮನ್‌ನಲ್ಲಿ ಟೂರ್ನಿಯು ನಡೆಯಲಿದೆ.

‘ಸೆಮಿಫೈನಲ್ ಮತ್ತು ಫೈನಲ್ ಸೇರಿದಂತೆ ಪಂದ್ಯಗಳನ್ನು ಲೈವ್ ಸ್ಕ್ರೀನಿಂಗ್ ಮಾಡಲು ಹಕ್ಕುಗಳನ್ನು ಪಡೆದುಕೊಂಡಿದ್ದೇವೆ’ ಎಂದು ಪಿವಿಆರ್ ಪ್ರಕಟಣೆಯಲ್ಲಿ ತಿಳಿಸಿದೆ.

ನವದೆಹಲಿ, ಮುಂಬೈ, ಪುಣೆ ಮತ್ತು ಅಹಮದಾಬಾದ್ ಸೇರಿದಂತೆ 35ಕ್ಕೂ ಹೆಚ್ಚು ನಗರಗಳ 75 ಮಲ್ಟಿಪ್ಲೆಕ್ಸ್‌ಗಳಲ್ಲಿ ಪಂದ್ಯಗಳು ಪ್ರಸಾರವಾಗಲಿವೆ.

'ದೊಡ್ಡ ಪರದೆಯಲ್ಲಿ ಕ್ರಿಕೆಟ್ ಪಂದ್ಯಗಳನ್ನು ನೋಡುವುದು ಬಹಳ ವಿಶೇಷವಾದ ಅನುಭವ. ಕ್ರೀಡಾಂಗಣಗಳಲ್ಲಿ ಕುಳಿತು ನೋಡುವಂತಹ ಭಾವನೆ ಪ್ರೇಕ್ಷಕರದ್ದಾಗುತ್ತದೆ’ ಎಂದು ಪಿವಿಆರ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೌತಮ್ ದತ್ತಾ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.