IND vs SL 1st Test: ಕಪಿಲ್ ದೇವ್ ದಾಖಲೆ ಮುರಿದ ಅಶ್ವಿನ್

ಮೊಹಾಲಿ: ದಿಗ್ಗಜ ಬೌಲರ್ ಕಪಿಲ್ ದೇವ್ ದಾಖಲೆಯನ್ನು ಮುರಿದಿರುವ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಎರಡನೇ ಬೌಲರ್ ಎಂಬ ದಾಖಲೆಗೆ ಭಾಜನರಾಗಿದ್ದಾರೆ.
ಮೊಹಾಲಿಯ ಐಎಸ್ ಬಿಂದ್ರಾ ಮೈದಾನದಲ್ಲಿ ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಪ್ರಥಮ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆಯಲ್ಲಿ ಅಶ್ವಿನ್ ಈ ಸ್ಮರಣೀಯ ಸಾಧನೆ ಮಾಡಿದರು.
ಇದನ್ನೂ ಓದಿ: ಮಹಿಳೆಯರ ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ 107 ರನ್ಗಳ ಜಯ
ಟೆಸ್ಟ್ ಕ್ರಿಕೆಟ್‌ನಲ್ಲಿ ಕಪಿಲ್ ದೇವ್ ಒಟ್ಟು 434 ವಿಕೆಟ್‌ಗಳನ್ನು ಗಳಿಸಿದ್ದಾರೆ. ಲಂಕಾದ ದ್ವಿತೀಯ ಇನ್ನಿಂಗ್ಸ್ ವೇಳೆಯಲ್ಲಿ ಚರಿತ ಅಸಲಂಕರನ್ನು ಔಟ್ ಮಾಡಿದ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ 435 ವಿಕೆಟ್‌ಗಳನ್ನು ಗಳಿಸಿದರು.
🎥 🎥 That moment when @ashwinravi99 picked the landmark 4⃣3⃣5⃣th Test wicket 👏 👏 #TeamIndia | #INDvSL | @Paytm pic.twitter.com/RKN3IguW8k
— BCCI (@BCCI) March 6, 2022
ಮಾಜಿ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ, ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ (619) ಕಬಳಿಸಿದ್ದಾರೆ.
ಇನ್ನು ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಸಾರ್ವಕಾಲಿಕ ಶ್ರೇಷ್ಠ ಟಾಪ್ 10 ಬೌಲರ್‌ಗಳ ಪಟ್ಟಿಗೂ ಅಶ್ವಿನ್ ಲಗ್ಗೆಯಿಟ್ಟಿದ್ದಾರೆ. ಇಲ್ಲಿ ಅಶ್ವಿನ್, ಒಂಬತ್ತನೇ ಸ್ಥಾನದಲ್ಲಿದ್ದಾರೆ.
ಶ್ರೀಲಂಕಾದ ಮಾಜಿ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ 800 ಹಾಗೂ ಆಸ್ಟ್ರೇಲಿಯಾದ ಮಾಜಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ 708 ವಿಕೆಟ್ ಗಳಿಸಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಭಾರತೀಯ ಬೌಲರ್‌ಗಳ ಪಟ್ಟಿ:
ಅನಿಲ್ ಕುಂಬ್ಳೆ: 619
ಆರ್ ಅಶ್ವಿನ್: 435*
ಕಪಿಲ್ ದೇವ್: 434
ಹರಭಜನ್ ಸಿಂಗ್: 417
ಇಶಾಂತ್ ಶರ್ಮಾ: 311*
ಜಹೀರ್ ಖಾನ್: 311
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.