ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

IND vs ENG 4th Test: ರಾಂಚಿ ಟೆಸ್ಟ್‌ನಲ್ಲಿ ವಿಶಿಷ್ಟ ದಾಖಲೆ ಬರೆದ ಅಶ್ವಿನ್

Published 23 ಫೆಬ್ರುವರಿ 2024, 9:34 IST
Last Updated 23 ಫೆಬ್ರುವರಿ 2024, 9:34 IST
ಅಕ್ಷರ ಗಾತ್ರ

ರಾಂಚಿ: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ 100 ವಿಕೆಟ್ ಗಳಿಸಿದ ಭಾರತದ ಮೊದಲ ಬೌಲರ್ ಎಂಬ ಖ್ಯಾತಿಗೆ ರವಿಚಂದ್ರನ್ ಅಶ್ವಿನ್ ಭಾಜನರಾಗಿದ್ದಾರೆ.

ರಾಂಚಿಯಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಲ್ಲಿ ಅಶ್ವಿನ್ ಈ ಸಾಧನೆ ಮಾಡಿದ್ದಾರೆ.

ಜಾನಿ ಬೆಸ್ಟೊ ಅವರನ್ನು ಎಲ್‌ಬಿಡಬ್ಲ್ಯು ಬಲೆಗೆ ಬೀಳಿಸಿದ ಅಶ್ವಿನ್, ಆಂಗ್ಲರ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ 100 ವಿಕೆಟ್‌ ಗಳಿಸಿದರು.

ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಪಂದ್ಯದಲ್ಲಷ್ಟೇ ಆಫ್ ಸ್ಪಿನ್ನರ್ ಅಶ್ವಿನ್, ಟೆಸ್ಟ್ ಕ್ರಿಕೆಟ್‌ನಲ್ಲಿ 500 ವಿಕೆಟ್‌‌ಗಳ ಸಾಧನೆ ಮಾಡಿದ್ದರು. ಆ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 500 ವಿಕೆಟ್ ಗಳಿಸಿದ ಭಾರತದ ಎರಡನೇ ಹಾಗೂ ಒಟ್ಟಾರೆಯಾಗಿ ವಿಶ್ವದ 9ನೇ ಬೌಲರ್ ಎನಿಸಿದ್ದರು.

ಇಂಗ್ಲೆಂಡ್ ವಿರುದ್ಧ 1,000 ರನ್ ಹಾಗೂ 100 ವಿಕೆಟ್ ಸಾಧನೆ:

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ 1,000 ರನ್ ಹಾಗೂ 100 ವಿಕೆಟ್ ಗಳಿಸಿದ ವಿಶ್ವದ ನಾಲ್ಕನೇ ಆಟಗಾರ ಎಂಬ ಹೆಗ್ಗಳಿಕೆಗೂ ಅಶ್ವಿನ್ ಪಾತ್ರರಾಗಿದ್ದಾರೆ. ಆ ಮೂಲಕ ವೆಸ್ಟ್‌ಇಂಡೀಸ್‌ನ ದಿಗ್ಗಜ ಗ್ಯಾರಿ ಸೋಬರ್ಸ್ ಅವರ ಜತೆ ಕಾಣಿಸಿಕೊಂಡಿದ್ದಾರೆ.

1. ಗ್ಯಾರಿ ಸೋಬರ್ಸ್ (ವೆಸ್ಟ್ ಇಂಡೀಸ್): 3,214 ರನ್ ಹಾಗೂ 102 ವಿಕೆಟ್

2. ಮಾಂಟಿ ನಾಬ್ಲ್ (ಆಸ್ಟ್ರೇಲಿಯಾ): 1,905 ರನ್ ಹಾಗೂ 115 ವಿಕೆಟ್

3. ಗಿಫೆನ್ (ಆಸ್ಟ್ರೇಲಿಯಾ): 1,238 ರನ್ ಹಾಗೂ 103 ವಿಕೆಟ್

4. ಆರ್. ಅಶ್ವಿನ್ (ಭಾರತ): 1,085 ರನ್ ಹಾಗೂ 100 ವಿಕೆಟ್

ಅಶ್ವಿನ್ ಅವರನ್ನು ಅಭಿನಂದಿಸಿದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ:

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT