ಭಾನುವಾರ, ಫೆಬ್ರವರಿ 23, 2020
19 °C

ಐಸಿಸಿ ನಿಯಮ ಉಲ್ಲಂಘನೆ | ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್‌ಗೆ ರಬಾಡ ಅಮಾನತು

ಎಪಿ Updated:

ಅಕ್ಷರ ಗಾತ್ರ : | |

Prajavani

ಪೋರ್ಟ್ ಎಲಿಜಬೆತ್ : ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಕಗಿಸೊ ರಬಾಡ ಅವರನ್ನು ಒಂದು ಟೆಸ್ಟ್ ಪಂದ್ಯದಲ್ಲಿ ಆಡದಂತೆ ಅಮಾನತು ಮಾಡಲಾಗಿದೆ.

ಇದರಿಂದಾಗಿ ಅವರು ಮುಂದಿನ ಶುಕ್ರವಾರ ಜೋಹಾನ್ಸ್‌ ಬರ್ಗ್‌ನಲ್ಲಿ ಇಂಗ್ಲೆಂಡ್ ವಿರುದ್ಧದ  ಸರಣಿಯ ಕೊನೆಯ ಪಂದ್ಯದಲ್ಲಿ ಆಡುವುದಿಲ್ಲ.

ಇಲ್ಲಿ ನಡೆದ ಟೆಸ್ಟ್‌ ಪಂದ್ಯದ ಮೊದಲ ದಿನದಾಟದಲ್ಲಿ ಅವರು ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಬ್ಯಾಟಿಂಗ್ ಮಾಡುವಾಗ ರಬಾಡ ಉದ್ಧಟತನದ ವರ್ತನೆ ತೋರಿದ್ದರು. ಅದರಿಂದಾಗಿ ಐಸಿಸಿ ನಿಯಮ ಉಲ್ಲಂಘನೆಯೆಂದು ಪರಿಗಣಿಸಿ ಅವರಿಗೆ ಶಿಕ್ಷೆ ಪ್ರಕಟಿಸಲಾಗಿದೆ. ಬ್ಯಾಟಿಂಗ್ ಮಾಡುತ್ತಿದ್ದ ರೂಟ್ ಸಮೀಪ ನಿಂತು ಕುಣಿ ದಾಡಿ, ಕೂಗಾಡಿ ಮತ್ತು ಕೆಟ್ಟ ಪದ ಬಳಕೆ ಮಾಡಿದ್ದರು ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು