ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಸಿಎ ಮುಖ್ಯಸ್ಥರಾಗಿ ದ್ರಾವಿಡ್ ನೇಮಕ

Last Updated 29 ಜೂನ್ 2019, 19:48 IST
ಅಕ್ಷರ ಗಾತ್ರ

ನವದೆಹಲಿ: ಹಿರಿಯ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರನ್ನು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಶನಿವಾರ ನವದೆಹಲಿಯಲ್ಲಿ ನಡೆದ ಬಿಸಿಸಿಐ ಮತ್ತು ಸಿಒಎ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆಯೆಂದು ಮೂಲಗಳು ತಿಳಿಸಿವೆ. ಜುಲೈ 1ರಂದು ಅವರು ಬೆಂಗಳೂರಿನ ಎನ್‌ಸಿಎನಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

ಉದಯೋನ್ಮುಖ ಕ್ರಿಕೆಟಿಗರಿಗೆ ತರಬೇತಿ, ರಾಷ್ಟ್ರೀಯ ಆಟಗಾರರ ಪುನಶ್ಚೇತನ, ಪ್ರತಿಭಾ ಶೋಧ ಮತ್ತು ಗಾಯಾಳು ಕ್ರಿಕೆಟಿಗರ ಚಿಕಿತ್ಸಾ ಘಟಕದ ನಿರ್ವಹಣೆ ಹೊಣೆಗಳನ್ನು ಅವರು ನಿಭಾಯಿಸಲಿದ್ದಾರೆ. ಕರ್ನಾಟಕದ ರಾಹುಲ್ ಸದ್ಯ ಭಾರತ ಎ ಮತ್ತು 19 ವರ್ಷದೊಳಗಿನವರ ತಂಡಗಳಿಗೆ ಮುಖ್ಯ ಕೋಚ್ ಆಗಿದ್ದಾರೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT