ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೀಂ ಇಂಡಿಯಾ ಮುಖ್ಯ ಕೋಚ್‌ ಆಗಿ ರಾಹುಲ್‌ ದ್ರಾವಿಡ್ ನೇಮಕ: ಬಿಸಿಸಿಐ

Last Updated 3 ನವೆಂಬರ್ 2021, 16:36 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕರ್ನಾಟಕದ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಲಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದೆ.

ದ್ರಾವಿಡ್ ಅವರು ಮುಖ್ಯ ಕೋಚ್ ಆಗಿ ಆಯ್ಕೆಯಾಗುವುದು ಈ ಹಿಂದೆಯೇ ಬಹುತೇಕ ಖಚಿತವಾಗಿತ್ತು. ಆದರೆ, ಅಧಿಕೃತ ಪ್ರಕ್ರಿಯೆಯ ಭಾಗವಾಗಿ ಬಿಸಿಸಿಐ ಇತ್ತೀಚೆಗೆ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಬಳಿಕ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್‌ಸಿಎ) ಮುಖ್ಯಸ್ಥರೂ ಆಗಿರುವ ರಾಹುಲ್ ದ್ರಾವಿಡ್ ಅರ್ಜಿ ಸಲ್ಲಿಸಿದ್ದರು.

ರಾಹುಲ್ ಔಪಚಾರಿಕವಾಗಿ ಹೆಡ್ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಎನ್‌ಸಿಎಯ ಬೌಲಿಂಗ್ ಕೋಚ್ ಪಾರಸ್ ಮತ್ತು ಫೀಲ್ಡಿಂಗ್ ಕೋಚ್ ಅಭಯ್ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಅವರ ಅರ್ಜಿ ಕೇವಲ ಔಪಚಾರಿಕವಾಗಿದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿ ಇತ್ತೀಚೆಗೆ ತಿಳಿಸಿದ್ದರು.

ಐಸಿಸಿ ಟ್ವೆಂಟಿ–20 ವಿಶ್ವಕಪ್ ಟೂರ್ನಿಯೊಂದಿಗೆ ಮುಖ್ಯ ಕೋಚ್ ಆಗಿ ರವಿ ಶಾಸ್ತ್ರಿ ಅವಧಿ ಮುಕ್ತಾಯಗೊಳ್ಳಲಿದೆ. ಈ ತಿಂಗಳ (ನವೆಂಬರ್‌) ಮಧ್ಯಭಾಗದಲ್ಲಿ ಭಾರತದಲ್ಲಿ ನ್ಯೂಜಿಲೆಂಡ್ ವಿರುದ್ಧ ಸರಣಿ ನಡೆಯಲಿದ್ದು, ಕೋಚ್ ಆಗಿ ದ್ರಾವಿಡ್ ಅವರು ತಂಡವನ್ನು ಸೇರಿಕೊಳ್ಳಲಿದ್ದಾರೆ. ದ್ರಾವಿಡ್ ಅವರು 1996ರಿಂದ 2012ರ ಅವಧಿಯಲ್ಲಿ ಭಾರತ ತಂಡದ ಪರ 164 ಟೆಸ್ಟ್, 344 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಸದ್ಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT