ಶನಿವಾರ, ಡಿಸೆಂಬರ್ 4, 2021
24 °C

ಟೀಂ ಇಂಡಿಯಾಕ್ಕೆ ರಾಹುಲ್‌ ದ್ರಾವಿಡ್ ಮುಖ್ಯ ಕೋಚ್‌: ವರದಿ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕರ್ನಾಟಕದ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.

ಹಾಲಿ ಕೋಚ್ ರವಿ ಶಾಸ್ತ್ರಿ ಅವರ ಅವಧಿ ಮುಕ್ತಾಯವಾದ ಬಳಿಕ ದ್ರಾವಿಡ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ‘ಎಎನ್‌ಐ’ ವರದಿ ಮಾಡಿದೆ.

ಆದರೆ, ಕೋಚ್ ನೇಮಕ ವಿಚಾರವಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

ಓದಿ: 

ಐಸಿಸಿ ಟ್ವೆಂಟಿ–20 ವಿಶ್ವಕಪ್ ಟೂರ್ನಿಯೊಂದಿಗೆ ಮುಖ್ಯ ಕೋಚ್ ಆಗಿ ರವಿ ಶಾಸ್ತ್ರಿ ಅವಧಿ ಮುಕ್ತಾಯಗೊಳ್ಳಲಿದೆ. ಬಳಿಕ ನವೆಂಬರ್‌ನಲ್ಲಿ ಭಾರತದಲ್ಲಿ ನ್ಯೂಜಿಲೆಂಡ್ ವಿರುದ್ಧ ಸರಣಿ ನಡೆಯಲಿದ್ದು, ಕೋಚ್ ಆಗಿ ದ್ರಾವಿಡ್ ಅವರು ತಂಡವನ್ನು ಸೇರಿಕೊಳ್ಳಲಿರುವುದು ಬಹುತೇಕ ಖಚಿತವಾಗಿದೆ ಎಂದು ‘ಇಎಸ್‌ಪಿಎನ್‌ ಕ್ರಿಕ್ ಇನ್ಫೊ’ ವರದಿ ಮಾಡಿದೆ.

ರವಿ ಶಾಸ್ತ್ರಿ ಅವರು 2017ರ ಮಧ್ಯಭಾಗದಲ್ಲಿ ಟೀಂ ಇಂಡಿಯಾ ಕೋಚ್ ಆಗಿ ನೇಮಕಗೊಂಡಿದ್ದರು. ಅವರು ತಮ್ಮ ಅವಧಿಯನ್ನು ವಿಸ್ತರಿಸುವಂತೆ ಮನವಿ ಮಾಡುವ ಸಾಧ್ಯತೆ ಇದೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಆದರೆ ವರದಿಗಳನ್ನು ಅವರು ನಿರಾಕರಿಸಿದ್ದರು.

ದ್ರಾವಿಡ್ ಅವರು 1996ರಿಂದ 2012ರ ಅವಧಿಯಲ್ಲಿ ಭಾರತ ತಂಡದ ಪರ 164 ಟೆಸ್ಟ್, 344 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಸದ್ಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ದ್ರಾವಿಡ್ ಅವರು 2 ವರ್ಷಗಳ ಅವಧಿಗೆ, ಅಂದರೆ 2023ರ ಏಕದಿನ ಕ್ರಿಕೆಟ್ ವಿಶ್ವಕಪ್ ವರೆಗೆ ಗುತ್ತಿಗೆ ಆಧಾರದಲ್ಲಿ ನೇಮಕವಾಗಲಿದ್ದಾರೆ ಎಂದು ‘ಟೈಮ್ಸ್‌ ಆಫ್ ಇಂಡಿಯಾ’ ವರದಿ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು