ಶುಕ್ರವಾರ, ಮಾರ್ಚ್ 5, 2021
28 °C

ರಾಹುಲ್ ದ್ರಾವಿಡ್‌ಗೆ ನೋಟಿಸ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ಹಿತಾಸಕ್ತಿ ಸಂಘರ್ಷ ನಿಯಮದ ಉಲ್ಲಂಘನೆ ವಿಚಾರಣೆಗೆ ಸಂಬಂಧಿಸಿದಂತೆ ಹಿರಿಯ ಕ್ರಿಕಟಿಗ ರಾಹುಲ್ ದ್ರಾವಿಡ್ ಅವರಿಗೆ ಬಿಸಿಸಿಐ ಒಂಬುಡ್ಸ್‌ಮನ್ ಡಿ.ಕೆ. ಜೈನ್  ನೋಟಿಸ್ ನೀಡಿದ್ದಾರೆ.

ಅವರನ್ನು ಈಚೆಗೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಮುಖಸ್ಥರನ್ನಾಗಿ ನೇಮಕ ಮಾಡಲಾಗಿದೆ. ಆದರೆ ಅವರು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಮಾಲೀಕತ್ವ ಹೊಂದಿರುವ ಇಂಡಿಯಾ ಸಿಮೆಂಟ್ಸ್‌ ಸಮೂಹದಲ್ಲಿ ಉಪಾಧ್ಯಕ್ಷರಾಗಿದ್ದಾರೆ. ಆದ್ದರಿಂದ ದ್ರಾವಿಡ್ ಅವರು ಹಿತಾಸಕ್ತಿ ಸಂಘರ್ಷ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆ ಸದಸ್ಯ ಸಂಜೀವ್ ಗುಪ್ತಾ ಅವರು ದೂರು ನೀಡಿದ್ದರು. 

‘ನಮಗೆ ದೂರು ಬಂದಿದ್ದು ನಿಜ. ಅದನ್ನು ಪರಿಶೀಲಿಸಿದ ನಂತರ ದ್ರಾವಿಡ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅದಕ್ಕೆ ಉತ್ತರಿಸಲು ಅವರಿಗೆ ಎರಡು ವಾರಗಳ ಗಡುವು ನೀಡಲಾಗಿದೆ. ಅವರ ಪ್ರತಿಕ್ರಿಯೆಯ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು’ ಎಂದು ಜೈನ್ ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು