ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಾರೋಗ್ಯ: ದಿಢೀರ್ ಬೆಂಗಳೂರಿಗೆ ಮರಳಿದ ರಾಹುಲ್ ದ್ರಾವಿಡ್

Last Updated 13 ಜನವರಿ 2023, 9:30 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಆರೋಗ್ಯ ಕೈಕೊಟ್ಟಿದ್ದು, ದಿಢೀರ್ ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಎಂದು ಹಿಂದೂಸ್ಥಾನ್ಸ್ ಟೈಮ್ಸ್ ವರದಿ ಮಾಡಿದೆ.

ಭಾನುವಾರ ತಿರುವನಂತಪುರದಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡ ಮತ್ತು ಸಹಾಯಕ ಸಿಬ್ಬಂದಿ ಇಂದು ಸಂಜೆ ಕೋಲ್ಕತ್ತದಿಂದ ತೆರಳಲಿದೆ. ಇದಕ್ಕೂ ಮುನ್ನವೇ ದ್ರಾವಿಡ್ ಅವರ ಆರೋಗ್ಯ ಹದಗೆಟ್ಟಿದ್ದರಿಂದ, ಬೆಳಗಿನ ಜಾವದ ವಿಮಾನದಲ್ಲಿ ಕೋಲ್ಕತ್ತದಿಂದ ಬೆಂಗಳೂರಿಗೆ ತೆರಳಿದ್ದಾರೆ. 2ನೇ ಏಕದಿನ ಪಂದ್ಯದ ವೇಳೆ ದ್ರಾವಿಡ್ ಅವರಿಗೆ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿದ್ದು, ಬೆಂಗಾಲ್ ಕ್ರಿಕೆಟ್ ಮಂಡಳಿಯ ವೈದ್ಯರು ತಪಾಸಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ದ್ರಾವಿಡ್ ವಿಮಾನದಲ್ಲಿ ಕುಳಿತಿರುವ ಮತ್ತು ವಿಮಾನ ನಿಲ್ದಾಣದಲ್ಲಿರುವ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ದ್ರಾವಿಡ್ ಆರೋಗ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಅವರು ಭಾನುವಾರ ಪಂದ್ಯಕ್ಕೂ ಮುನ್ನ ತಂಡವನ್ನು ಸೇರಿಕೊಳ್ಳಲಿದ್ದಾರೆ. ಬೆಂಗಳೂರಿನಲ್ಲಿ ವೈದ್ಯರನ್ನು ಭೇಟಿಯಾಗಿ ಕೆಲವು ಮುಂಜಾಗ್ರತಾ ಪರೀಕ್ಷೆಗಳನ್ನು ಮಾಡಿಸಿಕೊಳ್ಳಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ.

ಇದೇ ಜನವರಿ 11ಕ್ಕೆ ದ್ರಾವಿಡ್ ಅವರು 50ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು.

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡ 2–0 ಮುನ್ನಡೆ ಪಡೆಯುವ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ. ತಿರುವನಂತಪುರದ ಮೂರನೇ ಪಂದ್ಯ ಔಪಚಾರಿಕವಾಗಿ ಉಳಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT