ಬುಧವಾರ, ಆಗಸ್ಟ್ 10, 2022
24 °C

ಶ್ರೀಲಂಕಾ ಪ್ರವಾಸ: ಭಾರತ ಕ್ರಿಕೆಟ್ ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್ ಸಾಧ್ಯತೆ

ಪ್ರಜಾವಾಣಿ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ಭಾರತ ಕ್ರಿಕೆಟ್ ತಂಡ ಕೈಗೊಳ್ಳಲಿರುವ ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ತೆರಳಲಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ರಾಹುಲ್ 2014ರಲ್ಲಿ ಭಾರತ ಕ್ರಿಕೆಟ್ ತಂಡದ ಇಂಗ್ಲೆಂಡ್ ಪ್ರವಾಸದಲ್ಲಿ ಸಲಹೆಗಾರರಾಗಿ ತೆರಳಿದ್ದರು.

ಶ್ರೀಲಂಕಾ ಜತೆಗೆ ಸೀಮಿತ ಓವರ್‌ಗಳ ಆರು ಪಂದ್ಯಗಳ ಸರಣಿ ನಡೆಯಲಿದೆ. ಈ ಸಂದರ್ಭದಲ್ಲಿ ಟೀಂ ಇಂಡಿಯಾ ಟೆಸ್ಟ್ ತಂಡದೊಂದಿಗೆ ರವಿ ಶಾಸ್ತ್ರಿ, ಭರತ್ ಅರುಣ್ ಮತ್ತು ವಿಕ್ರಂ ರಾಥೋರ್ ಇಂಗ್ಲೆಂಡ್‌ನಲ್ಲಿ ಇರಲಿದ್ದಾರೆ.

2019ರಲ್ಲಿ ರಾಹುಲ್ ದ್ರಾವಿಡ್ ನ್ಯಾಶನಲ್ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಅಲ್ಲದೆ, 2015ರಿಂದ ಅಂಡರ್-19 ‘ಎ’ ತಂಡದ ಜತೆಗೆ ಕಾರ್ಯನಿರತರಾಗಿದ್ದಾರೆ.

ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ. ಜುಲೈ 2021ರಲ್ಲಿ ಪಂದ್ಯ ನಡೆಯುವ ಸಾಧ‌್ಯತೆಯಿದೆ. ಇದೇ ಅವಧಿಯಲ್ಲಿ ಇಂಗ್ಲೆಂಡ್ ಜತೆಗಿನ ಐದು ಪಂದ್ಯಗಳ ಟೆಸ್ಟ್ ಸರಣಿಗೆ ವಿರಾಟ್ ಕೊಹ್ಲಿ ನೇತೃತ್ವದ ತಂಡ ಇಂಗ್ಲೆಂಡ್‌ಗೆ ಪ್ರಯಾಣಿಸಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು