ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸಿ ಟಿ20 ರ‍್ಯಾಂಕಿಂಗ್‌: ರಾಹುಲ್‌ಗೆ ಬಡ್ತಿ

Last Updated 2 ಫೆಬ್ರುವರಿ 2022, 13:08 IST
ಅಕ್ಷರ ಗಾತ್ರ

ದುಬೈ: ಭಾರತ ತಂಡದ ಆರಂಭಿಕ ಆಟಗಾರ, ಕನ್ನಡಿಗ ಕೆ.ಎಲ್‌.ರಾಹುಲ್ ಅವರು ಐಸಿಸಿ ಟಿ20 ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ಒಂದು ಸ್ಥಾನ ಬಡ್ತಿ ಪಡೆದಿದ್ದು, ನಾಲ್ಕನೇ ಸ್ಥಾನಕ್ಕೇರಿದ್ದಾರೆ. ತಂಡದ ನಿಕಟಪೂರ್ವ ನಾಯಕ ವಿರಾಟ್‌ ಕೊಹ್ಲಿ ಮತ್ತು ಸೀಮಿತ ಓವರ್‌ಗಳ ಪಂದ್ಯಗಳ ನಾಯಕ ರೋಹಿತ್ ಶರ್ಮಾ ಅವರು ಕ್ರಮವಾಗಿ 10 ಮತ್ತು 11ನೇ ಸ್ಥಾನಗಳಲ್ಲೇ ಉಳಿದಿದ್ದಾರೆ.

ಬುಧವಾರ ಪ್ರಕಟಗೊಂಡಿರುವ ಬೌಲರ್‌ಗಳ ವಿಭಾಗದ ಕ್ರಮಾಂಕದಲ್ಲಿ ವೇಗಿ ಭುವನೇಶ್ವರ ಕುಮಾರ್ 20ನೇ ಸ್ಥಾನದಲ್ಲಿದ್ದರೆ, ಜಸ್‌ಪ್ರೀತ್ ಬೂಮ್ರಾ 26ನೇ ಸ್ಥಾನದಲ್ಲಿದ್ದಾರೆ.

ವೆಸ್ಟ್ ಇಂಡೀಸ್‌ನ ಎಡಗೈ ಸ್ಪಿನ್ನರ್‌ ಅಕೀಲ್ ಹೊಸೇನ್ ಮತ್ತು ವೇಗಿ ಜೇಸನ್ ಹೋಲ್ಡರ್ ಅವರು ವೃತ್ತಿಜೀವನದ ಶ್ರೇಷ್ಠ ಕ್ರಮಾಂಕಗಳಿಗೆ ಜಿಗಿದಿದ್ದು, ಕ್ರಮವಾಗಿ 18 ಮತ್ತು 23ನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ ಎದುರು ಇತ್ತೀಚೆಗೆ ಕೊನೆಗೊಂಡ ಸರಣಿಯಲ್ಲಿ ಇವರಿಬ್ಬರು ಉತ್ತಮ ಸಾಮರ್ಥ್ಯ ತೋರಿದ್ದರು. ವೆಸ್ಟ್‌ ಇಂಡೀಸ್‌ ತಂಡವು 3-2ರಿಂದ ಸರಣಿ ಗೆದ್ದುಕೊಂಡಿತ್ತು. ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ನಿಕೋಲಸ್ ಪೂರನ್‌ ಎಂಟು ಸ್ಥಾನ ಏರಿಕೆ ಕಂಡಿದ್ದು, ಸದ್ಯ 18ನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT