ಗುರುವಾರ , ಏಪ್ರಿಲ್ 15, 2021
23 °C
ಕೆ.ಎಲ್‌.ರಾಹುಲ್‌ ಎರಡನೇ ಸ್ಥಾನದಲ್ಲಿ ಸ್ಥಿರ

ಟಿ–20 ರ‍್ಯಾಂಕಿಂಗ್‌: ವಿರಾಟ್‌ ಕೊಹ್ಲಿಗೆ ಬಡ್ತಿ

ಪಿಟಿಐ Updated:

ಅಕ್ಷರ ಗಾತ್ರ : | |

ದುಬೈ: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರು ಐಸಿಸಿ ಟ್ವೆಂಟಿ–20 ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ಆರನೇ ಸ್ಥಾನಕ್ಕೇರಿದ್ದಾರೆ. ಅವರು ಒಂದು ಸ್ಥಾನ ಬಡ್ತಿ ಪಡೆದಿದ್ದು, ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಕೆ.ಎಲ್‌.ರಾಹುಲ್‌ ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ರಾಹುಲ್ ಬಳಿ ಸದ್ಯ 816 ರೇಟಿಂಗ್ ಪಾಯಿಂಟ್ಸ್ ಇವೆ. ಮೊದಲ ಸ್ಥಾನದಲ್ಲಿ ಇಂಗ್ಲೆಂಡ್‌ನ ಡೇವಿಡ್ ಮಲಾನ್ (915) ಇದ್ದಾರೆ. ಕೊಹ್ಲಿ 697 ಪಾಯಿಂಟ್ಸ್ ಕಲೆಹಾಕಿದ್ದಾರೆ.

ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಂ (801) ಒಂದು ಸ್ಥಾನ ಏರಿಕೆ ಕಂಡು ಮೂರನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾದ ಆ್ಯರನ್ ಫಿಂಚ್‌ ಒಂದು ಸ್ಥಾನ ಕುಸಿತ ಕಂಡಿದ್ದು ನಾಲ್ಕನೇ ಸ್ಥಾನಕ್ಕೆ ಜಾರಿದ್ದಾರೆ. ಐದನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ವ್ಯಾನ್ ಡರ್ ಡಸೆನ್‌ (700) ಇದ್ದಾರೆ.

ಬೌಲರ್‌ಗಳ ವಿಭಾಗದ ಅಗ್ರ ಐವರ ಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅಫ್ಗಾನಿಸ್ತಾನದ ರಶೀದ್ ಖಾನ್‌ (736) ಮೊದಲ ಸ್ಥಾನದಲ್ಲಿ ಮುಂದುವರಿದ್ದಾರೆ. ದಕ್ಷಿಣ ಆಫ್ರಿಕಾದ ತಬ್ರೇಜ್ ಶಂಸಿ (733), ಅಫ್ಗಾನಿಸ್ತಾನದ ಮುಜೀಬುರ್ ರೆಹಮಾನ್‌ (730), ಇಂಗ್ಲೆಂಡ್‌ನ ಆದಿಲ್ ರಶೀದ್‌ (700) ಹಾಗೂ ಆಸ್ಟ್ರೇಲಿಯಾದ ಆ್ಯಡಂ ಜಂಪಾ (676) ಕ್ರಮವಾಗಿ ಎರಡರಿಂದ ಐದನೇ ಸ್ಥಾನದಲ್ಲಿರುವ ಬೌಲರ್‌ಗಳು.

ಬೌಲರ್‌ಗಳ ಅಗ್ರ 10ರ ಪಟ್ಟಿಯಲ್ಲೂ ಭಾರತದ ಯಾವುದೇ ಆಟಗಾರರು ಇಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು