ಬುಧವಾರ, ಅಕ್ಟೋಬರ್ 28, 2020
21 °C
‌ಆಗ್ರಸ್ಥಾನಕ್ಕೆ ಮರಳಿದ ಡೆಲ್ಲಿ ಕ್ಯಾಪಿಟಲ್ಸ್‌

IPL 2020 | RR vs DC: ರಾಯಲ್ಸ್‌ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ–20 ಕ್ರಿಕೆಟ್ ಟೂರ್ನಿಯ 30ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 13 ರನ್‌ ಅಂತರದಿಂದ ಗೆಲುವು ಸಾಧಿಸಿತು.

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ ಏಳು ವಿಕೆಟ್‌ ಕಳೆದುಕೊಂಡು 161 ರನ್‌ ಗಳಿಸಿತ್ತು.

162 ರನ್‌ ಗುರಿ ಬೆನ್ನತ್ತಿದ್ದ ರಾಜಸ್ಥಾನ್‌ ರಾಯಲ್ಸ್‌ ತಂಡಕ್ಕೆ ಆರಂಭಿಕರಾದ ಜೋಸ್‌ ಬಟ್ಲರ್‌ 22, ಬೆನ್‌ ಸ್ಟ್ರೋಕ್ಸ್‌ 41, ಸಂಜು ಸ್ಯಾಮ್ಸನ್‌ 25, ರಾಬಿನ್‌ ಉತ್ತಪ್ಪ 32, ರನ್‌ ಗಳಿಸಿ ತಂಡಕ್ಕೆ ಆಸೆರೆಯಾದರು. ಆದರೆ, ಬಳಿಕ ಬಂದ ಆಟಗಾರರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ.

ರಾಯಲ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 148 ರನ್‌ ಗಳಿಸಿತು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್‌ ಸಂಘಟಿತ ಹೋರಾಟದಿಂದ ಗೆಲುವಿನ ನಗೆ ಬೀರಿತು.

ಡೆಲ್ಲಿ ಪರ ಎನ್ರಿಕ್ ನೊರ್ಟಿಯೆ 2, ತುಷಾರ್‌ ದೇಶ್‌ಪಾಂಡೆ 2, ಕಗಿಸೊ ರಬಾಡ, ಆರ್. ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್‌ ಪಡೆದು ಮಿಂಚಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು