ಮಂಗಳವಾರ, ಸೆಪ್ಟೆಂಬರ್ 29, 2020
21 °C

ರಾಜಸ್ಥಾನ ರಾಯಲ್ಸ್ ಕೋಚ್ ದಿಶಾಂತ್‌ಗೆ ಕೋವಿಡ್ ದೃಢ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುವ ರಾಜಸ್ಥಾನ ರಾಯಲ್ಸ್‌ ತಂಡದ ಫೀಲ್ಡಿಂಗ್ ಕೋಚ್ ದಿಶಾಂತ್ ಯಾಗ್ನಿಕ್‌ ಅವರಿಗೆ ಕೋವಿಡ್ –19 ಸೋಂಕು ಇರುವುದು ದೃಢಪಟ್ಟಿದೆ. ರಾಜಸ್ಥಾನ್ ರಾಯಲ್ಸ್‌ ಫ್ರಾಂಚೈಸ್ ಬುಧವಾರ ಈ ವಿಷಯವನ್ನು ತಿಳಿಸಿದೆ. ಯುಎಇಯಲ್ಲಿ ಮುಂದಿನ ತಿಂಗಳು 19ರಿಂದ ನಡೆಯಲಿರುವ ಟೂರ್ನಿಗಾಗಿ ತಂಡ ಅಲ್ಲಿಗೆ ತೆರಳಲು ಕೆಲವೇ ದಿನಗಳು ಬಾಕಿ ಇವೆ.

‘ಮುಂದಿನ ವಾರ ಮುಂಬೈನಲ್ಲಿ ಸೇರಿ ಅಲ್ಲಿಂದ ಯುಎಇಗೆ ತೆರಳುವ ಯೋಜನೆ ಹಾಕಿಕೊಂಡಿದ್ದೇವೆ. ಅದಕ್ಕೂ ಮೊದಲು ಸುರಕ್ಷತೆಯ ದೃಷ್ಟಿಯಿಂದ ಪರೀಕ್ಷೆ ನಡೆಸಲಾಗಿತ್ತು. ಆಟಗಾರರು, ನೆರವು ಸಿಬ್ಬಂದಿ ಮತ್ತು ತಂಡದ ಆಡಳಿತವು ಯುಎಇಗೆ ತೆರಳುವ ಮುನ್ನ ಎರಡು ಬಾರಿ ಪರೀಕ್ಷೆಗೆ ಒಳಗಾಗಬೇಕು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ತಿಳಿಸಿದೆ. ಹೆಚ್ಚುವರಿಯಾಗಿ ಒಂದು ಪರೀಕ್ಷೆ ನಡೆಸಲು ಫ್ರಾಂಚೈಸ್ ನಿರ್ಧರಿಸಿದೆ‘ ಎಂದು ಪ್ರಕಟಣೆ ತಿಳಿಸಿದೆ.

‘ಕೋಚ್ ದಿಶಾಂತ್ ಯಾಗ್ನಿಕ್ ಸದ್ಯ ಅವರ ತವರು ಪಟ್ಟಣ ಉದಯಪುರದಲ್ಲಿದ್ದು 14 ದಿನಗಳ ಕ್ವಾರಂಟೈನ್‌ಗಾಗಿ ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಲಾಗಿದೆ’ ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು