ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ 64ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಖನೌ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 220 ರನ್ಗಳಿಸಿದೆ.

ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಗೆಲುವು ದಾಖಲಿಸಲು ರಾಜಸ್ಥಾನ ರಾಯಲ್ಸ್ ತಂಡವು 221 ರನ್ ಗಳಿಸಬೇಕಿದೆ.

ಎಲ್ಎಸ್ಜಿ ಪರ ಆರಂಭಿಕ ಆಟಗಾರ ಜೋಶ್ ಇಂಗ್ಲಿಸ್, ಕೇವಲ 29 ಎಸೆತಗಳಲ್ಲಿ 7 ಬೌಂಡರಿ, 3 ಸಿಕ್ಸರ್ ಸಹಿತ 60 ರನ್ ಗಳಿಸಿ ಔಟಾದರು. ನಂತರ ಬಂದ ನಿಕೋಲಸ್ ಪೂರನ್(16 ರನ್) ಹೆಚ್ಚು ಹೊತ್ತು ಕ್ರೀಸ್ನಲ್ಲಿ ನಿಲ್ಲಲಿಲ್ಲ.

ಮೊದಲ ವಿಕೆಟ್ಗೆ ಜೋಶ್ ಇಂಗ್ಲಿಸ್ ಜೊತೆ ಸೇರಿಕೊಂಡು 50 ಎಸೆತಗಳಲ್ಲಿ 109 ರನ್ ಜೊತೆಯಾಟವಾಡಿದ್ದ ಮಿಚೆಲ್ ಮಾರ್ಷ್, 3 ವಿಕೆಟ್ಗೆ ಪಂತ್ ಜೊತೆಗೂಡಿ 64 ರನ್(41 ಎಸೆತ) ಜೊತೆಯಾಟವಾಡಿದರು.

35 ರನ್ ಗಳಿಸಿದ್ದ ಪಂತ್, ಕೊನೆಯ ಓವರ್ನಲ್ಲಿ ರನೌಟ್ ಆದರು. 57 ಎಸೆತಗಳಲ್ಲಿ 96 ರನ್ ಗಳಿಸಿದ್ದ ಮಿಚೆಲ್ ಮಾರ್ಷ್ ಕೂಡ ರನೌಟ್ಗೆ ಬಲಿಯಾದರು.

ರಾಜಸ್ಥಾನ ರಾಯಲ್ಸ್ ಪರ ಯಶ್ ರಾಜ್ ಪೂಂಜಾ 2 ವಿಕೆಟ್ ಕಬಳಿಸಿದರು.

ಕಳೆದ ಐದು ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ಗೆದ್ದಿರುವ ರಾಜಸ್ಥಾನ ರಾಯಲ್ಸ್, ಪ್ಲೇ–ಆಫ್ ಪ್ರವೇಶಿಸಲು ಈ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಾದ ಅನಿರ್ವಾಯತೆಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.