ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024:ಐಪಿಎಲ್‌ನಿಂದ ಹಿಂದೆ ಸರಿದ ಆ್ಯಡಂ ಜಂಪಾ:ರಾಜಸ್ಥಾನ ರಾಯಲ್ಸ್‌ಗೆ ಹಿನ್ನಡೆ

Published 21 ಮಾರ್ಚ್ 2024, 13:28 IST
Last Updated 21 ಮಾರ್ಚ್ 2024, 13:28 IST
ಅಕ್ಷರ ಗಾತ್ರ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ(ಐಪಿಎಲ್) ರಾಜಸ್ಥಾನ ರಾಯಲ್ಸ್ ತಂಡದ ಲೆಗ್ ಸ್ಪಿನ್ನರ್ ಆ್ಯಡಂ ಜಂಪಾ ವೈಯಕ್ತಿಕ ಕಾರಣಗಳಿಂದ ಐಪಿಎಲ್‌ನ ಈ ವರ್ಷದ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದಾರೆ.

ಕಳೆದ ವರ್ಷ ನಡೆದ ಐಪಿಎಲ್ ಆಟಗಾರರ ಹರಾಜಿಗೂ ಮುನ್ನ, ಜಂಪಾ ಅವರನ್ನು ರಾಜಸ್ಥಾನ ರಾಯಲ್ಸ್ ತಂಡ ₹1.5 ಕೋಟಿ ನೀಡಿ ತಂಡಕ್ಕೆ ಸೇರಿಸಿಕೊಂಡಿತ್ತು. ಆಸ್ಟ್ರೇಲಿಯಾ ತಂಡದ ಬಿಡುವಿಲ್ಲದ ವೇಳಾಪಟ್ಟಿ ಹಿನ್ನೆಲೆಯಲ್ಲಿ ಅವರ ಹೆಸರನ್ನು ಐಪಿಎಲ್‌ನಿಂದ ಹಿಂಪಡೆಯಲಾಗಿದೆ ಎಂದು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ.

ಭಾರತದ ಸ್ಪಿನ್ನರ್‌ಗಳಾದ ರವಿಚಂದ್ರನ್ ಅಶ್ವಿನ್ ಮತ್ತು ಯಜುವೇಂದ್ರ ಚಾಹಲ್ ಜೊತೆ ಆಡಂ ಚಂಪಾ, ರಾಜಸ್ಥಾನ ತಂಡದಲ್ಲಿ ತ್ರಿವಳಿ ಸ್ಪಿನ್ನರ್‌ಗಳಲ್ಲಿ ಒಬ್ಬರಾಗಿದ್ದರು.

ಕಳೆದ ವರ್ಷದ ಆವೃತ್ತಿಯಲ್ಲಿ ರಾಜಸ್ಥಾನ ಪರ 6 ಪಂದ್ಯಗಳನ್ನು ಆಡಿದ್ದ ಜಂಪಾ, 23.50ರ ಸರಾಸರಿಯಲ್ಲಿ 8 ವಿಕೆಟ್ ಉರುಳಿಸಿದ್ದರು. ಚೆನ್ನೈ ವಿರುದ್ಧದ ಪಂದ್ಯದಲ್ಲಿ 22 ರನ್‌ಗೆ 3 ವಿಕೆಟ್ ಉರುಳಿಸಿದ್ದ ಅವರು ತಂಡದ ಗೆಲುವಿಗೆ ಕಾರಣರಾಗಿದ್ದರು.

ಗಾಯದಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ವೇಗಿ ಪ್ರಸಿದ್ಧ ಕೃಷ್ಣ ಈಗಾಗಲೇ ತಂಡದಿಂದ ಹೊರಗುಳಿದಿದ್ದಾರೆ. ಈ ನಡುವೆ, ಜಂಪಾ ಅನುಪಸ್ಥಿಯು ರಾಜಸ್ಥಾನ ತಂಡಕ್ಕೆ ದುಬಾರಿಯಾಗುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT