2026 ರ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗೆ ದಿನಗಣನೆ ಆರಂಭವಾಗಿದೆ. ಎಲ್ಲಾ ತಂಡಗಳು ಕೂಡ ಮೈದಾನದಲ್ಲಿ ಕಠಿಣ ಅಭ್ಯಾಸ ನಡೆಸುತ್ತಿವೆ. ಈ ವೇಳೆ ರಾಜಸ್ಥಾನ ರಾಯಲ್ಸ್ ತಂಡದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಹಾಗು ಅನುಭವಿ ಆಟಗಾರ ರವೀಂದ್ರ ಜಡೇಜಾ ನಡುವಿನ ಅಭ್ಯಾಸದ ವಿಡಿಯೊ ಕ್ರಿಕೆಕ್ ಅಭಿಮಾನಿಗಳ ಗಮನಸೆಳೆದಿದೆ.

ಐಪಿಎಲ್ ಉದ್ಘಾಟನಾ ಆವೃತ್ತಿ (2008) ಪ್ರಶಸ್ತಿ ವಿಜೇತ ತಂಡವಾಗಿರುವ ರಾಜಸ್ಥಾನ ಎರಡನೇ ಟ್ರೋಫಿಗಾಗಿ ಎದುರು ನೋಡುತ್ತಿದೆ. ಆ ನಿಟ್ಟಿನಲ್ಲಿ ತಂಡದಲ್ಲಿ ಕೂಡ ಕೆಲವು ಬದಲಾವಣೆ ಮಾಡಿಕೊಂಡು ಈ ಬಾರಿ ಮೈದಾನಕ್ಕೆ ಇಳಿಯಲು ಸಿದ್ಧತೆ ನಡೆಸುತ್ತಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ 12 ವರ್ಷಗಳ ಕಾಲ ಆಡಿದ್ದ ಜಡೇಜಾ ಅವರನ್ನು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ಟ್ರೇಡ್ ಮೂಲಕ ಸೇರಿಸಿಕೊಂಡಿದೆ.

ಸದ್ಯ ನೆಟ್ಸ್ನಲ್ಲಿ ಅಭ್ಯಾಸ ಆರಂಭಿಸಿರುವ ರಾಜಸ್ಥಾನ ರಾಯಲ್ಸ್ ತಂಡದ ವಿಡಿಯೊ ಒಂದು ಕ್ರಿಕೆಟ್ ಪ್ರಿಯರ ಗಮನಸೆಳೆಯುತ್ತಿದೆ. ಜಡೇಜಾ ಅವರು ಯುವ ಬ್ಯಾಟರ್ ವೈಭವ್ ಸೂರ್ಯವಂಶಿಗೆ ಬೌಲಿಂಗ್ ಮಾಡಿದ್ದಾರೆ. ಈ ವೇಳೆ ವೈಭವ್ ಜಡೇಜಾ ಅವರಿಗೆ ದೊಡ್ಡ ಹೊಡೆತಗಳನ್ನು ಬಾರಿಸಿದ್ದಾರೆ.

ಇತ್ತೀಚಿಗೆ ಮುಕ್ತಾಯಗೊಂಡ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸ್ಪೋಟಕ ಶತಕ ಸಿಡಿಸಿ ತಂಡವನ್ನು ಗೆಲ್ಲಿಸಿದ್ದ ವೈಭವ್, ನೆಟ್ಸ್ನಲ್ಲಿ ಜಡೇಜಾ ಎಸೆದ ಒಂದು ಎಸೆತ ಹೊರತುಪಡಿಸಿ ಉಳಿದ ಎಲ್ಲಾ ಎಸೆತಕ್ಕೂ ದೊಡ್ಡ ಹೊಡೆತ ಬಾರಿಸಿದ್ದಾರೆ. ಈ ವಿಡಿಯೊವನ್ನು ರಾಜಸ್ಥಾನ ರಾಯಲ್ಸ್ ತಂಡ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.