ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್ ಗೆದ್ದಿದ್ದಕ್ಕೆ ‘ಜೀತ್ ಗಯೀ...’ ಸ್ಟೇಟಸ್ ಹಾಕಿದ್ದ ಶಿಕ್ಷಕಿ ಕೆಲಸದಿಂದ ವಜಾ

Last Updated 26 ಅಕ್ಟೋಬರ್ 2021, 13:05 IST
ಅಕ್ಷರ ಗಾತ್ರ

ಜೈಪುರ: ಟಿ–20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆದ್ದದ್ದನ್ನು ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ ಸಂಭ್ರಮಿಸಿದ್ದ ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯ ಶಿಕ್ಷಕಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ.

ಉದಯಪುರದ ನೀರಜಾ ಮೋದಿ ಶಾಲೆಯ ಶಿಕ್ಷಕಿ ನಫೀಸಾ ಅಟ್ಟಾರಿ ಅವರು ಪಾಕಿಸ್ತಾನಿ ಆಟಗಾರರ ಚಿತ್ರವನ್ನು ಸ್ಟೇಟಸ್‌ನಲ್ಲಿ ಹಾಕಿಕೊಂಡು ‘ಜೀತ್ ಗಯೀ... ನಾವು ಗೆದ್ದಿದ್ದೇವೆ’ಎಂದು ಶೀರ್ಷಿಕೆ ಹಾಕಿದ್ದರು.

ಆಕೆಯ ವಾಟ್ಆ್ಯಪ್ಪ್ ಸ್ಟೇಟಸ್‌ನ ಸ್ಕ್ರೀನ್‌ಶಾಟ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಶಾಲೆಯ ಆಡಳಿತ ಮಂಡಳಿಯು ಅವರನ್ನು ಕೆಲಸದಿಂದ ವಜಾಗೊಳಿಸಿದೆ.

‘ಹೌದು, ನಾವು ಆ ಶಿಕ್ಷಕಿಯನ್ನು ಕೆಲಸದಿಂದ ವಜಾಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ’ಎಂದು ಶಾಲೆಯನ್ನು ನಡೆಸುತ್ತಿರುವ ಸೋಜಾಟಿಯಾ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಮಹೇಂದ್ರ ಸೋಜಾಟಿಯಾ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ) ಅಡಿಯಲ್ಲಿ ಶಿಕ್ಷಕಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಂಬಾ ಮಾತಾ ಪೊಲೀಸ್ ಠಾಣೆ ಠಾಣಾಧಿಕಾರಿ ನರ್ಪತ್ ಸಿಂಗ್ ಹೇಳಿದ್ದಾರೆ.

‘ನನ್ನ ತಪ್ಪಿನ ಅರಿವಾಗುತ್ತಿದ್ದಂತೆ ಸ್ಟೇಟಸ್ ಅನ್ನು ಅಳಿಸಿದೆ, ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ’ಎಂದು ಶಿಕ್ಷಕಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT