ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿನಿಂದನೆ: ಸಲ್ಮಾನ್ ವಿರುದ್ಧ ವಿಚಾರಣೆಗೆ ತಡೆ

Last Updated 23 ಏಪ್ರಿಲ್ 2018, 19:59 IST
ಅಕ್ಷರ ಗಾತ್ರ

ನವದೆಹಲಿ : ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧದ ಕ್ರಿಮಿನಲ್ ವಿಚಾರಣೆಗೆ ಸುಪ್ರೀಂಕೋರ್ಟ್ ಸೋಮವಾರ ತಡೆ ನೀಡಿದೆ.

‘ಟೈಗರ್ ಜಿಂದಾ ಹೈ’ ಚಿತ್ರದ ಪ್ರಚಾರದ ವೇಳೆ ವಾಲ್ಮೀಕಿ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪ ಸಲ್ಮಾನ್ ಮೇಲಿದೆ.

ತಡೆ ನೀಡುವಂತೆ ಕೋರಿ ಸಲ್ಮಾನ್ ಪರ ಹಿರಿಯ ವಕೀಲ ಎನ್.ಕೆ. ಕೌಲ್ ಅವರು ಸಲ್ಲಿಸಿದ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಪೀಠ ಮಾನ್ಯಮಾಡಿತು.

ನಟನ ವಿರುದ್ಧ ದೆಹಲಿ, ಗುಜರಾತ್, ರಾಜಸ್ಥಾನ ಹಾಗೂ ಮುಂಬೈನಲ್ಲಿ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ ಎಂದು ಕೌಲ್ ಅವರು ಮಾಹಿತಿ ನೀಡಿದರು.

ಬಾಕಿ ಇರುವ ಎಲ್ಲ ಪ್ರಕರಣಗಳ ಮಾಹಿತಿ ನೀಡುವಂತೆ ಸೂಚಿಸಿದ ಪೀಠ, ವಿಚಾರಣೆ ತಡೆಗೆ ಆದೇಶಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT