ಸೋಮವಾರ, ಮಾರ್ಚ್ 27, 2023
31 °C

ರಣಜಿ ಟ್ರೋಫಿ ಕ್ರಿಕೆಟ್: ಮಯಂಕ್ ಬಳಗಕ್ಕೆ ನಿಹಾಲ್ ಸೇರ್ಪಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಆಡಲಿರುವ ಕರ್ನಾಟಕ ತಂಡದಿಂದ ವಿಕೆಟ್‌ಕೀಪರ್ ಬಿ.ಆರ್. ಶರತ್ ಅವರನ್ನು ಕೈಬಿಟ್ಟು ನಿಹಾಲ್ ಉಲ್ಲಾಳ ಅವರನ್ನು ಆಯ್ಕೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಸೋಮವಾರ ತಂಡವನ್ನು ಪ್ರಕಟಿಸಿದೆ.

ಶರತ್ ಹೊರತುಪಡಿಸಿದರೆ ಉಳಿದ ಆಟಗಾರರು ತಂಡದಲ್ಲಿ ಮುಂದುವರೆದಿದ್ದಾರೆ. ಮಯಂಕ್ ಅಗರವಾಲ್ ನಾಯಕತ್ವದ ಬಳಗವು ಇದೇ 8ರಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ನಾಲ್ಕರ ಘಟ್ಟದ ಪಂದ್ಯದಲ್ಲಿ ಸೌರಾಷ್ಟ್ರವನ್ನು ಎದುರಿಸಲಿದೆ. 

ತಂಡ: ಮಯಂಕ್ ಅಗರವಾಲ್ (ನಾಯಕ), ಆರ್. ಸಮರ್ಥ್ (ಉಪನಾಯಕ), ನಿಕಿನ್ ಜೋಸ್, ದೇವದತ್ತ ಪಡಿಕ್ಕಲ್, ಮನೀಷ್ ಪಾಂಡೆ, ಕೆ.ವಿ. ಸಿದ್ಧಾರ್ಥ್, ಶರತ್ ಶ್ರೀನಿವಾಸ್, ನಿಹಾಲ್ ಉಲ್ಲಾಳ  (ಇಬ್ಬರೂ ವಿಕೆಟ್‌ಕೀಪರ್), ಕೃಷ್ಣಪ್ಪ ಗೌತಮ್, ಶ್ರೇಯಸ್ ಗೋಪಾಲ್, ವಿ. ಕೌಶಿಕ್, ವಿದ್ವತ್ ಕಾವೇರಪ್ಪ, ವಿ. ವೈಶಾಖ, ಎಂ. ವೆಂಕಟೇಶ್, ಶುಭಾಂಗ್ ಹೆಗಡೆ.

ಪಿ.ವಿ. ಶಶಿಕಾಂತ್ (ಕೋಚ್), ದೀಪಕ್ ಚೌಗುಲೆ (ಫೀಲ್ಡಿಂಗ್ ಕೋಚ್), ಎ. ರಮೇಶ್ ರಾವ್ (ಮ್ಯಾನೇಜರ್), ಜಾಬಪ್ರಭು (ಫಿಸಿಯೊ), ಕೆ.ಸಿ. ಅವಿನಾಶ್ (ಸ್ಟ್ರೆಂಥ್–ಕಂಡಿಷನಿಂಗ್ ಕೋಚ್), ಸಿ.ಎಂ. ಸೋಮಸುಂದರ್ (ಮಸಾಜ್ ತಜ್ಞ), ರಾಜ್‌ಕೀರ್ತಿ ಕಪಾಡಿಯಾ (ವಿಡಿಯೊ ಅನಾಲಿಸ್ಟ್).

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು