ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಣಜಿ: ಕರ್ನಾಟಕ 400 ರನ್‌, ನಿರಾಸೆ ಮೂಡಿಸಿದ ರೋನಿತ್

Last Updated 21 ನವೆಂಬರ್ 2018, 9:01 IST
ಅಕ್ಷರ ಗಾತ್ರ

ಬೆಳಗಾವಿ: ಮುಂಬೈ ವಿರುದ್ಧ ಇಲ್ಲಿ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ಕರ್ನಾಟಕ ತಂಡ ಮೊದಲ ಇನಿಂಗ್ಸ್‌ನಲ್ಲಿ 400 ರನ್ ಕಲೆಹಾಕಿದೆ.

ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಆಯೋಜನೆಯಾಗಿರುವ ಪಂದ್ಯದಲ್ಲಿ ರಾಜ್ಯ ತಂಡ ಮಂಗಳವಾರದ ಅಂತ್ಯಕ್ಕೆ ನಾಲ್ಕು ವಿಕೆಟ್‌ ನಷ್ಟಕ್ಕೆ 263 ರನ್‌ ಗಳಿಸಿತ್ತು. 104 ರನ್‌ ಗಳಿಸಿ ಕ್ರೀಸ್‌ ಕಾಯ್ದುಕೊಂಡಿದ್ದ ಕೆ.ವಿ. ಸಿದ್ದಾರ್ಥ್‌ ಒಟ್ಟು 161 ರನ್‌ ಕಲೆಹಾಕಿದರು.

ಬಾಲಂಗೋಚಿ ಬ್ಯಾಟ್ಸ್‌ಮನ್‌ ಅಭಿಮನ್ಯು ಮಿಥುನ್‌ 29 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಒಂದು ಸಿಕ್ಸರ್‌ ಬಾರಿಸಿ ತಂಡದ ರನ್ ವೇಗ ಹೆಚ್ಚಿಸಿದರು.

ಸ್ಥಳೀಯ ಆಟಗಾರ ರೋನಿತ್‌ ಮೋರೆ ಬ್ಯಾಟಿಂಗ್‌ ನೋಡಬೇಕು ಎಂದು ನೂರಾರು ಅಭಿಮಾನಿಗಳು ಕ್ರೀಡಾಂಗಣಕ್ಕೆ ಬಂದು ಎದ್ದು. ಸುಚಿತ್ ಔಟಾದ ಬಳಿಕ ರೋನಿತ್ ಮೋರೆ ಕ್ರೀಸ್‌ಗೆ ಬರುತ್ತಿದ್ದಂತೆ ಜನ ಚಪ್ಪಾಳೆ ಹೊಡೆದು ಕೇಕೆ ಹಾಕಿದರು. ರೋನಿತ್‌ ಪೋಷಕರು ಕೂಡ ಕ್ರೀಡಾಂಗಣಕ್ಕೆ ಬಂದಿದ್ದರು. ಆದರೆ, ರೋನಿತ್‌ ತಾವೆದುರಿಸಿದ ಮೊದಲ ಎಸೆತದಲ್ಲಿಯೇ ಅಖಿಲ್‌ ಹೆರ್ವಾಡ್ಕರ್‌ ಕೈಗೆ ಕ್ಯಾಚ್ ಕೊಟ್ಟು ನಿರ್ಗಮಿಸಿದರು.

ಮುಂಬೈ ತಂಡದ ಪ್ರಮುಖ ಬೌಲರ್‌ ಶಿವಂ ದುಬೆ ಏಳು ವಿಕೆಟ್ ಪಡೆದರು. ಪ್ರಥಮ ಇನಿಂಗ್ಸ್‌ ಆರಂಭಿಸಿರುವ ಮುಂಬೈ 5 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 10 ರನ್‌ ಗಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT