ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಣಜಿ ಟ್ರೋಫಿ: ಸೆಮಿಫೈನಲ್‌ನಲ್ಲಿ ಮುಗ್ಗರಿಸಿದ ಕರ್ನಾಟಕ, ಫೈನಲ್‌ಗೆ ಬಂಗಾಳ 

Last Updated 3 ಮಾರ್ಚ್ 2020, 7:47 IST
ಅಕ್ಷರ ಗಾತ್ರ

ಕೋಲ್ಕತ್ತ: ಹಿನ್ನಡೆಯೊಂದಿಗೆ ನಾಲ್ಕನೇ ದಿನದಾಟ ಆರಂಭಿಸಿದ ಕರ್ನಾಟಕ ತಂಡ ಪ್ರಮುಖ ಆಟಗಾರರ ಬ್ಯಾಟಿಂಗ್‌ ವೈಫಲ್ಯದಿಂದ ರಣಜಿ ಟ್ರೋಫಿ ಸೆಮಿಫೈನಲ್‌ ಪಂದ್ಯದಲ್ಲಿ ಬಂಗಾಳದ ವಿರುದ್ಧ ಸೋಲು ಅನುಭವಿಸಿತು.

ಈಡನ್‌ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕದ ವಿರುದ್ಧ ಬಂಗಾಳ 174 ರನ್‌ಗಳ ಬೃಹತ್‌ ಗೆಲುವು ಸಾಧಿಸಿತು. ಈ ಮೂಲಕ 13 ವರ್ಷಗಳ ಬಳಿಕ ಫೈನಲ್‌ ಪ್ರವೇಶಿಸಿದ ಸಾಧನೆ ಮಾಡಿದೆ.

254 ರನ್‌ ಗುರಿಯೊಂದಿಗೆ ನಾಲ್ಕನೇ ದಿನದಾಟ ಆರಂಭಿಸಿದ ಕರ್ನಾಟಕಕ್ಕೆ ದೇವದತ್ತ ಪಡಿಕ್ಕಲ್‌ 62 ರನ್‌ ಗಳಿಸಿ ಆಸರೆಯಾದರು. ಉಳಿದಂತೆ ಕೆ.ಎಲ್‌.ರಾಹುಲ್‌, ಮನೀಷ್‌ ಪಾಂಡೆ, ಕರುಣ್‌ ನಾಯರ್‌ ಸೇರಿದಂತೆ ಪ್ರಮುಖ ಆಟಗಾರರು ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದರು.

ಬಂಗಾಳ ಪರ ಮುಖೇಶ್‌ ಕುಮಾರ್‌ 6, ಇಶಾನ್‌ ಪೊರೆಲ್‌ 2, ಆಕಾಶದೀಪ್‌ 2 ವಿಕೆಟ್‌ ಪಡೆದು ಮಿಂಚಿದರು.

ಕರ್ನಾಟಕದ ಎದುರು ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದಬಂಗಾಳ ಮೊದಲ ಇನಿಂಗ್ಸ್‌ನಲ್ಲಿ ಅನುಸ್ಟುಪ್ ಮಜುಂದಾರ್ (149*) ಶತಕದ ಬಲದಿಂದ92 ಓವರ್‌ಗಳಲ್ಲಿ 312 ರನ್‌ ಗಳಿಸಿತ್ತು. ಈ ಬೃಹತ್‌ ಗುರಿ ಬೆನ್ನತ್ತಿದ ಕರ್ನಾಟಕ 36.2 ಓವರ್‌ಗಳಲ್ಲಿ 122 ರನ್‌ ಗಳಿಸಿ ಆಲೌಟ್‌ ಆಯಿತು.

190 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನಿಂಗ್ಸ್‌ ಆರಂಭಿಸಿದ ಬಂಗಾಳ ಪಡೆ 54.4 ಓವರ್‌ಗಳಲ್ಲಿ 161 ರನ್‌ ಗಳಿಸಿ ಆಲೌಟ್‌ ಆಗಿತ್ತು.351 ರನ್‌ಗಳ ಬೃಹತ್‌ ಗುರಿಯೊಂದಿಗೆ ಎರಡನೇ ಇನಿಂಗ್ಸ್‌ ಆರಂಭಿಸಿದ ಕರುಣ್‌ ಪಡೆ 55.3 ಓವರ್‌ಗಳಲ್ಲಿ 177 ರನ್‌ ಗಳಿಸಿ ಆಲೌಟ್‌ ಆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT