ಹುಬ್ಬಳ್ಳಿ: ಇಲ್ಲಿನ ರಾಜನಗರದ ಕೆಎಸ್ಸಿಎ ಕ್ರೀಡಾಂಗಣ ಮೊದಲ ಬಾರಿಗೆ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಆತಿಥ್ಯ ವಹಿಸುತ್ತಿದೆ. ಮಂಗಳವಾರ ಪಂದ್ಯ ಆರಂಭವಾಗಲಿದ್ದು, ಒಂದೆಡೆ ಭರದ ಸಿದ್ಧತೆಗಳು ನಡೆದಿವೆ. ಇನ್ನೊಂದೆಡೆ ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

‘ಪಂದ್ಯ ವೀಕ್ಷಣೆಗೆ ಬರುವವರಿಗೆ ಕ್ರೀಡಾಂಗಣದ 3 ಮತ್ತು 4 ನೇ ದ್ವಾರಗಳಿಂದ ಪ್ರವೇಶ ನೀಡಲಾಗುತ್ತದೆ. ಮೂರನೇ ಗೇಟ್ನಿಂದ ಪ್ರವೇಶಕ್ಕೆ ಟಿಕೆಟ್ ದರ ₹200 ಮತ್ತು ನಾಲ್ಕನೇ ಗೇಟ್ ಮೂಲಕ ಪ್ರವೇಶಕ್ಕೆ ₹100 ಟಿಕೆಟ್ ದರ ನಿಗದಿಪಡಿಸಲಾಗಿದೆ’ ಎಂದು ಕೆ.ಎಸ್.ಸಿ.ಎ ಧಾರವಾಡ ವಲಯದ ಅಧ್ಯಕ್ಷ ಅಲ್ತಾಫ್ ಕಿತ್ತೂರು ತಿಳಿಸಿದರು.

ಮಂಗಳವಾರ ಬೆಳಿಗ್ಗೆ 8.30ಕ್ಕೆ ಟಿಕೆಟ್ ನೀಡಲು ಆರಂಭಿಸಲಾಗುವುದು. ಪ್ರತಿ ದಿನ 4,500 ಟಿಕೆಟ್ಗಳನ್ನು ಮಾತ್ರ ನೀಡಲಾಗುವುದು. ಸಾರ್ವಜನಿಕರು ನಗದು ಮತ್ತು ಯುಪಿಐ ಮೂಲಕ ಹಣ ಪಾವತಿಸಿ ಟಿಕೆಟ್ ಖರೀದಿಸಬಹುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.