ಶಿವಮೊಗ್ಗ: ಇಲ್ಲಿನ ನವುಲೆಯ ಕೆಎಸ್ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಗೋವಾ ನಡುವಣ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ.

ಮಧ್ಯಾಹ್ನ 2.40 ಕ್ಕೆ ಆರಂಭವಾದ ಮಳೆ ಧಾರಾಕಾರವಾಗಿ ಸುರಿಯುತ್ತಿರುವ ಕಾರಣ ಆಟ ಸ್ಥಗಿತಗೊಂಡಿದೆ.

ಕರ್ನಾಟಕ ತಂಡ ಮೊದಲ ಇನಿಂಗ್ಸ್ನಲ್ಲಿ 110.1 ಓವರ್ಗಳಲ್ಲಿ 371ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಶುರುಮಾಡಿರುವ ಗೋವಾ 13 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು 28 ರನ್ ಗಳಿಸಿದೆ.

ನಿಗದಿಯಂತೆ ಸಂಜೆ 4.30ಕ್ಕೆ ದಿನದಾಟ ಕೊನೆಗೊಳ್ಳಬೇಕಿತ್ತು. ಮಳೆ ಮುಂದುವರಿದಿರುವುದರಿಂದ ಮತ್ತೆ ಆಟ ಶುರುವಾಗುವುದು ಅನುಮಾನ ಎನಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.