ಮಂಗಳವಾರ, ಫೆಬ್ರವರಿ 25, 2020
19 °C

ರಣಜಿ: ಮುಂಬೈ ಗೆಲುವಿಗೆ 366 ರನ್‌ ಗುರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕೊನೆಯ ದಿನವಾದ ಶುಕ್ರವಾರ ಬೆಳಿಗ್ಗೆ ಒಂದೂವರೆ ಗಂಟೆ ಬ್ಯಾಟಿಂಗ್ ಮಾಡಿದ ಕರ್ನಾಟಕ ತಂಡ ಮುಂಬೈ ವಿರುದ್ಧದ ರಣಜಿ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ 51 ಓವರ್‌ಗಳಲ್ಲಿ ಐದು ವಿಕೆಟ್‌ ಕಳೆದುಕೊಂಡು 170 ರನ್ ಗಳಿಸಿ ಡಿಕ್ಲೇರ್‌ ಮಾಡಿಕೊಂಡಿದೆ.

ಕರ್ನಾಟಕ ತಂಡ ಮೊದಲ ಇನಿಂಗ್ಸ್‌ನಲ್ಲಿ 195 ರನ್ ಮುನ್ನಡೆ ಹೊಂದಿತ್ತು. ಈ ಮೊತ್ತವೂ ಸೇರಿದಂತೆ ರಾಜ್ಯ ತಂಡ ಮುಂಬೈ ಗೆಲುವಿಗೆ 366 ರನ್‌ ಗುರಿ ನಿಗದಿ ಮಾಡಿದೆ. 71 ಓವರ್‌ಗಳಲ್ಲಿ ಈ ಗುರಿ ಮುಟ್ಟಬೇಕಾದ ಸವಾಲು ಮುಂಬೈ ತಂಡದ ಮುಂದಿದೆ.

ಮೊದಲ ಇನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದ ಕೆ.ವಿ. ಸಿದ್ದಾರ್ಥ್‌  ದ್ವಿತೀಯ ಇನಿಂಗ್ಸ್‌ನಲ್ಲಿ 71 ರನ್‌ ಗಳಿಸಿದರು. 125 ಎಸೆತಗಳನ್ನು ಎದುರಿಸಿ ಆರು ಬೌಂಡರಿ ಹಾಗೂ ಒಂದು ಸಿಕ್ಸರ್‌ ಸಿಡಿಸಿದರು. ಇವರ ಮತ್ತೊಂದು ಶತಕಕ್ಕೆ ಕಾಯದೇ ಕರ್ನಾಟಕ ತಂಡ ಇನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡಿದ್ದು ಅಚ್ಚರಿಗೆ ಕಾರಣವಾಗಿದೆ.

ಸ್ಟುವರ್ಟ್‌ ಬಿನ್ನಿ 46 ಎಸೆತಗಳಲ್ಲಿ 30 ರನ್ ಕಲೆಹಾಕಿದರು.

ಕರ್ನಾಟಕ ತಂಡ ತನ್ನ ಮೊದಲ ಪಂದ್ಯದಲ್ಲಿ ವಿದರ್ಭ ಎದುರು ಡ್ರಾ ಮಾಡಿಕೊಂಡಿತ್ತು. ಆದ್ದರಿಂದ ಈ ಬಾರಿಯ ಟೂರ್ನಿಯಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದೆ. ಈ ಆಸೆ ಈಡೇರಿಸಬೇಕಾದ ಜವಾಬ್ದಾರಿ ರಾಜ್ಯ ತಂಡದ ಬೌಲರ್‌ಗಳ ಮೇಲಿದೆ.

ಕರ್ನಾಟಕ ತಂಡ ಮೊದಲ ಇನಿಂಗ್ಸ್‌ನಲ್ಲಿ 400 ರನ್‌ ಗಳಿಸಿತ್ತು. ಮುಂಬೈ 205 ರನ್‌ಗೆ ಆಲೌಟ್ ಆಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು