ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ: ಶಿಕ್ಷೆ ಪ್ರಶ್ನಿಸಿ ನೇಪಾಳ ಕ್ರಿಕೆಟ್ ಮಾಜಿ ನಾಯಕ ಲಮಿಚಾನೆ ಮೇಲ್ಮನವಿ

Published 22 ಫೆಬ್ರುವರಿ 2024, 20:53 IST
Last Updated 22 ಫೆಬ್ರುವರಿ 2024, 20:53 IST
ಅಕ್ಷರ ಗಾತ್ರ

ಕಠ್ಮಂಡು: ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ ಅವರು ಅತ್ಯಾಚಾರ ಪ್ರಕರಣದಲ್ಲಿ ಎಂಟು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಗುರುವಾರ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಕರಣ ವಿಚಾರಣೆ ವೇಳೆ ಜೈಲಿನಿಂದ ಹೊರಗೆ ಉಳಿಯಲು ಅವರಿಗೆ ಅನುಮತಿ ನೀಡಲಾಗಿದೆ. 

ಡಿಸೆಂಬರ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 23 ವರ್ಷದ ಸಂದೀಪ್‌ಗೆ ಶಿಕ್ಷೆ ವಿಧಿಸಲಾಗಿತ್ತು. 

‘ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದೇವೆ. ಮೇಲ್ಮನವಿ ವಿಚಾರಣೆ ವೇಳೆ ಲಾಮಿಚಾನೆ ಬಂಧನದಿಂದ ಹೊರಗುಳಿಯಬೇಕೆಂಬ ಅರ್ಜಿಯನ್ನು ಸ್ವೀಕರಿಸಲಾಗಿದೆ’ ಎಂದು ಅವರ ವಕೀಲ ಸರೋಜ್ ಘಿಮಿರೆ ತಿಳಿಸಿದ್ದಾರೆ.  

ನೇಪಾಳದ ಪ್ರಮುಖ ಆಟಗಾರನಾಗಿದ್ದ ಸಂದೀಪ್ 2018ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿ ಆಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT