ದುಬೈ: ಭಾರತದ ಅನುಭವಿ ಸ್ಪಿನ್ನರ್ ಆರ್. ಅಶ್ವಿನ್ ಅವರು ಐಸಿಸಿ ಟೆಸ್ಟ್ ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ ಬುಧವಾರ ಅಗ್ರಸ್ಥಾನಕ್ಕೆ ಮರಳಿದ್ದಾರೆ. ಆಸ್ಟ್ರೇಲಿಯಾ ಎದುರಿನ ನಾಲ್ಕನೇ ಟೆಸ್ಟ್‌ನಲ್ಲಿ ಉತ್ತಮ ಸಾಮರ್ಥ್ಯ ತೋರಿದ್ದು ಅವರ ಕ್ರಮಾಂಕ ಏರಿಕೆಗೆ ಕಾರಣವಾಗಿದೆ.
ಅಹಮದಾಬಾದ್‌ನಲ್ಲಿ ನಡೆದ ಟೆಸ್ಟ್ ಡ್ರಾದಲ್ಲಿ ಕೊನೆಗೊಂಡಿತ್ತು. ಅಶ್ವಿನ್ ಈ ಪಂದ್ಯದಲ್ಲಿ 91 ರನ್ ನೀಡಿ ಆರು ವಿಕೆಟ್ ಗಳಿಸಿದ್ದರು. ಇದರೊಂದಿಗೆ ಬಾರ್ಡರ್–ಗಾವಸ್ಕರ್ ಸರಣಿಯಲ್ಲಿ ಗರಿಷ್ಠ ವಿಕೆಟ್ (ಒಟ್ಟು 25) ಗಳಿಸಿದ ಬೌಲರ್ ಎನಿಸಿಕೊಂಡಿದ್ದರು. ಸದ್ಯ ಅಶ್ವಿನ್, ಇಂಗ್ಲೆಂಡ್‌ನ ಜೇಮ್ಸ್ ಆ್ಯಂಡರ್ಸನ್ ಅವರನ್ನು ಹಿಂದಿಕ್ಕಿದ್ದಾರೆ.
ಭಾರತದ ಅಕ್ಷರ್ ಪಟೇಲ್ ಅವರು ಆರು ಸ್ಥಾನಗಳ ಬಡ್ತಿ ಪಡೆದು, 28ನೇ ಸ್ಥಾನದಲ್ಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.