ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸಿ ಟೆಸ್ಟ್ ಆಲ್‌ರೌಂಡರ್ ಪಟ್ಟಿ: ಐದನೇ ಸ್ಥಾನಕ್ಕೇರಿದ ರವಿಚಂದ್ರನ್ ಅಶ್ವಿನ್

Last Updated 17 ಫೆಬ್ರುವರಿ 2021, 10:37 IST
ಅಕ್ಷರ ಗಾತ್ರ

ದುಬೈ: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದ್ದಾರೆ. ಉತ್ತಮ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐದನೇ ಸ್ಥಾನ ಕಾಯ್ದುಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಆಕರ್ಷಕ ಶತಕ ಸಿಡಿಸಿದ್ದರ ಜತೆಗೆ 8 ವಿಕೆಟ್‌ಗಳನ್ನೂ ಕಬಳಿಸಿದ್ದರು. ಪಂದ್ಯದಲ್ಲಿ ಭಾರತವು 317 ರನ್‌ಗಳಿಂದ ಜಯ ಗಳಿಸಿತ್ತು.

ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ 407 ಅಂಕಗಳೊಂದಿಗೆ ವೆಸ್ಟ್‌ ಇಂಡೀಸ್‌ನ ಜಾಸನ್ ಹೋಲ್ಡರ್ ಮೊದಲ ಸ್ಥಾನದಲ್ಲಿದ್ದಾರೆ. ಐದನೇ ಸ್ಥಾನದಲ್ಲಿರುವ ಅಶ್ವಿನ್ 336 ಅಂಕ ಹೊಂದಿದ್ದಾರೆ. 403 ಅಂಕಗಳೊಂದಿಗೆ ರವೀಂದ್ರ ಜಡೇಜಾ ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ಇಗ್ಲೆಂಡ್‌ನ ಬೆನ್ ಸ್ಟೋಕ್ಸ್ (397 ಅಂಕ) ಹಾಗೂ ನಾಲ್ಕನೇ ಸ್ಥಾನದಲ್ಲಿ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ (352 ಅಂಕ) ಇದ್ದಾರೆ.

ಉತ್ತಮ ಬೌಲರ್‌ಗಳ ಪಟ್ಟಿಯಲ್ಲಿ ಅಶ್ವಿನ್ 804 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಪ್ಯಾಟ್ ಕಮಿನ್ಸ್‌ 908 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ 761 ಅಂಕಗಳೊಂದಿಗೆ 8ನೇ ಸ್ಥಾನ ಕಾಯ್ದುಕೊಂಡಿದ್ದಾರೆ.

ಉತ್ತಮ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್‌ 919 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 891 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಐದನೇ ಸ್ಥಾನದಲ್ಲಿರುವ ಕೊಹ್ಲಿ 838 ಅಂಕ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT