IND vs SL: ಜಡೇಜ ಆಲ್‌ರೌಂಡರ್ ಆಟ; ಭಾರತಕ್ಕೆ ಇನ್ನಿಂಗ್ಸ್ ಗೆಲುವು

ಮೊಹಾಲಿ: ರವೀಂದ್ರ ಜಡೇಜ ಆಲ್‌ರೌಂಡರ್ ಆಟದ (ಅಜೇಯ 175 ರನ್ ಹಾಗೂ ಪಂದ್ಯದಲ್ಲಿ 9 ವಿಕೆಟ್) ನೆರವಿನಿಂದ ಭಾರತ ತಂಡವು ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಹಾಗೂ 222 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮಹತ್ವದ ಮುನ್ನಡೆ ದಾಖಲಿಸಿದೆ.
ಮೊಹಾಲಿಯ ಐಎಸ್ ಬಿಂದ್ರಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಎಂಟು ವಿಕೆಟ್ ನಷ್ಟಕ್ಕೆ 574 ರನ್‌ಗಳ ಬೃಹತ್ ಮೊತ್ತ ಪೇರಿಸಿದ್ದ ಭಾರತ ತಂಡವು ಡಿಕ್ಲೇರ್ ಘೋಷಿಸಿತ್ತು. ಇದಕ್ಕೆ ಉತ್ತರವಾಗಿ ಕೇವಲ 174 ರನ್ನಿಗೆ ಆಲೌಟ್ ಆಗಿರುವ ಲಂಕಾ ಫಾಲೋ ಆನ್‌ಗೆ ಗುರಿಯಾಗಿತ್ತು.
ಇದನ್ನೂ ಓದಿ: IND vs SL 1st Test: ಕಪಿಲ್ ದೇವ್ ದಾಖಲೆ ಮುರಿದ ಅಶ್ವಿನ್
ದ್ವಿತೀಯ ಇನ್ನಿಂಗ್ಸ್‌ನಲ್ಲಿ ಲಂಕಾದ ಚಿತ್ರಣ ಬದಲಾಗಲಿಲ್ಲ. ಅಲ್ಲದೆ ಕೇವಲ 178 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಳ್ಳುವ ಮೂಲಕ ಹೀನಾಯ ಸೋಲಿಗೆ ಶರಣಾಗಿದೆ.
𝗪𝗛𝗔𝗧. 𝗔. 𝗪𝗜𝗡! 👏 👏@ImRo45 begins his Test captaincy stint with a win as #TeamIndia beat Sri Lanka by an innings & 2⃣2⃣2⃣ runs in the first @Paytm #INDvSL Test in Mohali. 👌 👌
Scorecard ▶️ https://t.co/XaUgOQVg3O pic.twitter.com/P8HkQSgym3
— BCCI (@BCCI) March 6, 2022
ಇದರೊಂದಿಗೆ ಕೇವಲ ಮೂರೇ ದಿನದ ಅಂತರದಲ್ಲಿ ಭಾರತ ಪಂದ್ಯವನ್ನು ವಶಪಡಿಸಿಕೊಂಡಿದೆ. ಬ್ಯಾಟಿಂಗ್‌ನಲ್ಲಿ ಅಜೇಯ 175 ರನ್ ಗಳಿಸಿದ್ದ ಜಡೇಜ ಮೊದಲ ಇನ್ನಿಂಗ್ಸ್‌ನಲ್ಲಿ 41 ರನ್ ತೆತ್ತು ಐದು ವಿಕೆಟ್ ಕಬಳಿಸಿ ಮಿಂಚಿದರು. ಬಳಿಕ ದ್ವಿತೀಯ ಇನ್ನಿಂಗ್ಸ್‌ನಲ್ಲೂ 46 ರನ್ನಿಗೆ ನಾಲ್ಕು ವಿಕೆಟ್ ಕಬಳಿಸಿ ಎದುರಾಳಿಗಳಿಗೆ ಬಲವಾದ ಪೆಟ್ಟು ನೀಡಿದರು.
ಈ ಮೂಲಕ 175 ರನ್ ಹಾಗೂ ಪಂದ್ಯದಲ್ಲಿ 9 ವಿಕೆಟ್ ಗಳಿಸುವ ಮೂಲಕ ಸ್ಮರಣೀಯ ಸಾಧನೆ ಮಾಡಿದರು. ಜಡೇಜ ಅವರಿಗೆ ಕೈಜೋಡಿಸಿದ ಅಶ್ವಿನ್ ಪಂದ್ಯದಲ್ಲಿ ಒಟ್ಟು ಆರು ವಿಕೆಟ್ ಬಳಿಸಿದರು. ಅಶ್ವಿನ್ ಆಕರ್ಷಕ ಅರ್ಧಶತಕವನ್ನೂ (61) ಗಳಿಸಿದ್ದರು.
ಇದನ್ನೂ ಓದಿ: ಮಹಿಳೆಯರ ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ 107 ರನ್‌ಗಳ ಜಯ
ರಿಷಬ್ ಪಂತ್ (96) ಹಾಗೂ 100ನೇ ಟೆಸ್ಟ್ ಆಡುತ್ತಿರುವ ವಿರಾಟ್ ಕೊಹ್ಲಿ (45) ಉಪಯುಕ್ತ ಕೊಡುಗೆಯನ್ನು ನೀಡಿದ್ದರು.
ಲಂಕಾ ಪರ ಮೊದಲ ಇನ್ನಿಂಗ್ಸ್‌ನಲ್ಲಿ ಪಾತುಮ್ ನಿಸ್ಸಂಕಾ (61*) ಹಾಗೂ ದ್ವಿತೀಯ ಇನ್ನಿಂಗ್ಸ್‌ನಲ್ಲಿ ನಿರೋಶನ್ ಡಿಕ್ವೆಲ್ಲಾ (51*) ಹೋರಾಟವನ್ನು ಹೊರತುಪಡಿಸಿದರೆ ಇತರೆ ಯಾವ ಬ್ಯಾಟರ್‌ಗಳಿಗೂ ಕ್ರೀಸಿನಲ್ಲಿ ನೆಲೆಯೂರಲು ಸಾಧ್ಯವಾಗಲಿಲ್ಲ.
ಒಟ್ಟಾರೆಯಾಗಿ ವಿರಾಟ್ ಕೊಹ್ಲಿ ಅವರ 100ನೇ ಪಂದ್ಯವನ್ನು ಭಾರತ ಸ್ಮರಣೀಯವಾಗಿಸಿದೆ. ಅತ್ತ ಟೆಸ್ಟ್ ನಾಯಕತ್ವ ವಹಿಸಿದ ಮೊದಲ ಪಂದ್ಯದಲ್ಲೇ ರೋಹಿತ್ ಗೆಲುವಿನೊಂದಿಗೆ ಶುಭಾರಂಭ ಮಾಡಿದ್ದಾರೆ. ಇದೇ ಪಂದ್ಯದಲ್ಲಿ ಕಪಿಲ್ ದೇವ್ ದಾಖಲೆ ಮುರಿದಿರುವ ಅಶ್ವಿನ್ (435 ವಿಕೆಟ್), ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಎರಡನೇ ಬೌಲರ್ ಎನಿಸಿದ್ದಾರೆ.
ಇದನ್ನೂ ಓದಿ: ಆರು ವಿಶ್ವಕಪ್ ಟೂರ್ನಿಗಳಲ್ಲಿ ಪಾಲ್ಗೊಂಡ ಮೊದಲ ಮಹಿಳಾ ಕ್ರಿಕೆಟರ್ ಮಿಥಾಲಿ ರಾಜ್
5⃣th wicket of the match 👌👌
4⃣3⃣5⃣th wicket in Tests 🙌 🙌
Sit back & relive how @ashwinravi99 became #TeamIndia's second-highest wicket-taker in Test cricket 🎥 🔽 #INDvSL @Paytm
— BCCI (@BCCI) March 6, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.