ಎಜ್‌ಬಾಸ್ಟನ್:ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ವಿದೇಶಿ ಅಂಗಳದಲ್ಲಿ ಇದೇ ಮೊದಲ ಬಾರಿಗೆ ಟೆಸ್ಟ್‌ಕ್ರಿಕೆಟ್‌ನಲ್ಲಿ ಶತಕ ದಾಖಲಿಸಿ ಸಂಭ್ರಮಿಸಿದ್ದಾರೆ.

ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 183 ಬಾಲ್‌ಗಳನ್ನು ಎದುರಿಸಿದ ಜಡೇಜಾ 100 ರನ್‌ಗಳನ್ನು ಗಳಿಸಿದರು.

ಅಂದಹಾಗೆ, ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ ಇದು ಜಡೇಜಾ ಅವರ ಮೂರನೇ ಶತಕ. 2018ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ರಾಜ್‌ಕೋಟ್‌ನಲ್ಲಿ ತಮ್ಮ ಮೊದಲ ಶತಕ ಗಳಿಸಿದ್ದರು. ಕಳೆದ ಮಾರ್ಚ್‌ನಲ್ಲಿ ಮೊಹಾಲಿಯಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಅವರು ಎರಡನೇ ಶತಕ ದಾಖಲಿಸಿದ್ದರು.

ಒಂಬತ್ತು ತಿಂಗಳುಗಳ ಹಿಂದೆ ಇಂಗ್ಲೆಂಡ್ ವಿರುದ್ಧ ನಡೆದಿದ್ದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತವು 2–1ರ ಮುನ್ನಡೆ ಸಾಧಿಸಿತ್ತು. ಆದರೆ, ಕೊನೆಯ ಟೆಸ್ಟ್ ಸಮಯಕ್ಕೆ ಆಟಗಾರರನ್ನು ಕೋವಿಡ್ ಕಾಡಿತ್ತು. ಅದರಿಂದಾಗಿ ಆ ಪಂದ್ಯವನ್ನು ಈಗ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.