ಗುವಾಹಟಿ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ವಿರುದ್ಧ ಕಣಕ್ಕಿಳಿಯುವ ಮೂಲಕ ರಾಜಸ್ಥಾನ ರಾಯಲ್ಸ್ ತಂಡದ ರವೀಂದ್ರ ಜಡೇಜಾ ಅವರು ಟಿ20 ಕ್ರಿಕೆಟ್ನಲ್ಲಿ 350ನೇ ಪಂದ್ಯಗಳನ್ನು ಆಡಿದ ಗೌರವಕ್ಕೆ ಭಾಜನರಾಗಿದ್ದಾರೆ.

ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದಿರುವ ರಾಜಸ್ಥಾನ ರಾಯಲ್ಸ್ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಜಡೇಜಾ ಅವರು 74 ಅಂತರರಾಷ್ಟ್ರೀಯ ಟಿ20 ಹಾಗೂ 257 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ. ಲೀಸ್ಟ್ ಎ ಸೇರಿದಂತೆ 350 ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ. ಅದರಲ್ಲಿ ಒಟ್ಟು 3992 ರನ್ ಹಾಗೂ 237 ವಿಕೆಟ್ ಪಡೆದಿದ್ದಾರೆ.

ಆ ಮೂಲಕ 350ಕ್ಕೂ ಹೆಚ್ಚು ಟಿ20 ಪಂದ್ಯಗಳನ್ನು ಆಡಿರುವ ಭಾರತೀಯ ಆಟಗಾರರಾದ ರೋಹಿತ್ ಶರ್ಮಾ, ಧೋನಿ ಹಾಗೂ ವಿರಾಟ್ ಕೊಹ್ಲಿ ಅವರೊಂದಿಗೆ ಎಲೈಟ್ ಪಟ್ಟಿಗೆ ಸೇರಿದ್ದಾರೆ.

350ಕ್ಕೂ ಹೆಚ್ಚು ಟಿ20 ಪಂದ್ಯಗಳನ್ನು ಆಡಿರುವ ಭಾರತೀಯ ಆಟಗಾರರ ಪಟ್ಟಿ ಇಲ್ಲಿದೆ:

ರೋಹಿತ್ ಶರ್ಮಾ: 466

ವಿರಾಟ್ ಕೊಹ್ಲಿ: 417

ದಿನೇಶ್ ಕಾರ್ತಿಕ್: 415

ಮಹೇಂದ್ರ ಸಿಂಗ್ ಧೋನಿ: 405

ಸೂರ್ಯಕುಮಾರ್ ಯಾದವ್: 363

ರವೀಂದ್ರ ಜಡೇಜಾ: 350

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.